ಅಕ್ಟೋಬರ್ 8ರಿಂದ 18ರವರೆಗೆ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ
ಈಬಾರಿ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಚಿತ್ರದುರ್ಗ: ಮುರುಘಾ ಮಠದಿಂದ ಆಯೋಜಿಸಿರುವ ಶರಣ ಸಂಸ್ಕೃತಿ ಉತ್ಸವವನ್ನು ಅಕ್ಟೋಬರ್ 8ರಿಂದ 18ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ. ಮುರುಘಾಮಠದ ಅನುಭವ ಮಂಟಪದಲ್ಲಿ ಶರಣಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ, ಗೋಷ್ಠಿ ಆಯೋಜಿಸಲಾಗಿದೆ.
ಅಕ್ಟೋಬರ್ 17ರಂದು ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈಬಾರಿ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಸಹ ಅವರು ತಿಳಿಸಿದರು.
ಅ.18 ರಂದು ಸರ್ವಜನಾಂಗದ ಮಠಾಧೀಶರ ಸಮಾವೇಶ ನಡೆಯಲಿದ್ದು, ಅದೇ ದಿನ ಸಂಜೆ ಮುರುಘಾಶ್ರೀಗೆ ಗುರುವಂದನೆ ಕಾರ್ಯಕ್ರಮ ಜರುಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಸವಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಇದನ್ನೂ ಓದಿ:
Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ
International Coffee Day 2021: ಕಾಫಿ ಸೇವನೆಯಿಂದ ಆರೋಗ್ಯಕ್ಕೆ ಏನೇನು ಪ್ರಯೋಜನಗಳಿವೆ? ಇಲ್ಲಿವೆ ಮಾಹಿತಿ