AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಣೆಹಳ್ಳಿ ಶಿವಸಂಚಾರ ನಾಟಕೋತ್ಸವಕ್ಕೆ ಚಾಲನೆ: ಯಡಿಯೂರಪ್ಪ, ದೊಡ್ಡರಂಗೇಗೌಡ ಭಾಗಿ

ನಾಟಕೋತ್ಸವದಲ್ಲಿ ಮಾತನಾಡಿದ ಯಡಿಯೂರಪ್ಪ, ಸಾಹಿತಿ ದೊಡ್ಡರಂಗೇಗೌಡರು ಸಲಹೆ ಮಾಡಿದ್ದ ಸಾಣೇಹಳ್ಳಿಯಲ್ಲಿ ಸಾಂಸ್ಕೃತಿಕ ವಿಶ್ವವಿದ್ಯಾಲಯ ಆರಂಭಿಸುವ ಬೇಡಿಕೆ ಕುರಿತು ಪ್ರಸ್ತಾಪಿಸಿದರು

ಸಾಣೆಹಳ್ಳಿ ಶಿವಸಂಚಾರ ನಾಟಕೋತ್ಸವಕ್ಕೆ ಚಾಲನೆ: ಯಡಿಯೂರಪ್ಪ, ದೊಡ್ಡರಂಗೇಗೌಡ ಭಾಗಿ
ಬಿ.ಎಸ್.ಯಡಿಯೂರಪ್ಪ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ
TV9 Web
| Edited By: |

Updated on: Nov 02, 2021 | 11:11 PM

Share

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಲ್ಲಿ ಮಂಗಳವಾರ ಶಿವಸಂಚಾರ ನಾಟಕೋತ್ಸವಕ್ಕೆ ರಂಗಕರ್ಮಿ ಶ್ರೀನಿವಾಸ್ ಜಿ.ಕಪ್ಪಣ್ಣ ಚಾಲನೆ ನೀಡಿದರು. ತರಳಬಾಳು ಮಠದಿಂದ ಆಯೋಜಿಸಿರುವ ನಾಟಕೋತ್ಸವವು ಶಿವಕುಮಾರ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ತರಳಬಾಳು ಮಠದ ಡಾ.ಪಂಡಿತಾರಾಧ್ಯ ಸ್ವಾಮೀಜಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿರಿದ್ದರು.

ನಾಟಕೋತ್ಸವದಲ್ಲಿ ಮಾತನಾಡಿದ ಯಡಿಯೂರಪ್ಪ, ಸಾಹಿತಿ ದೊಡ್ಡರಂಗೇಗೌಡರು ಸಲಹೆ ಮಾಡಿದ್ದ ಸಾಣೇಹಳ್ಳಿಯಲ್ಲಿ ಸಾಂಸ್ಕೃತಿಕ ವಿಶ್ವವಿದ್ಯಾಲಯ ಆರಂಭಿಸುವ ಬೇಡಿಕೆ ಕುರಿತು ಪ್ರಸ್ತಾಪಿಸಿದರು. ನಾನು ಮುಖ್ಯಮಂತ್ರಿ ಆಗಿದ್ದಿದ್ದರೆ ಈಗಲೇ ಘೋಷಣೆ ಮಾಡುತ್ತಿದ್ದೆ. ನಾಟಕೋತ್ಸವ ಸಮಾರೋಪಕ್ಕೆ ಮುಖ್ಯಮಂತ್ರಿ ಬರುತ್ತಾರೆ. ಸಾಂಸ್ಕೃತಿಕ ವಿಶ್ವವಿದ್ಯಾಲಯದ ಬಗ್ಗೆ ಅವರಿಗೆ ಹೇಳುತ್ತೇನೆ. ಸಾಣೇಹಳ್ಳಿ ಎಂಬ ಕುಗ್ರಾಮ ಈಗ ಸಾಂಸ್ಕೃತಿಕ ಕೇಂದ್ರ ಆಗಿದೆ. ಡಾ.ಪಂಡಿತಾರಾಧ್ಯಶ್ರೀ ನಾಟಕ ಚಳವಳಿ ಆರಂಭಿಸಿದ್ದಾರೆ. ಶಿವಕುಮಾರ ಕಲಾಸಂಘ ದೇಶಾದ್ಯಂತ ಖ್ಯಾತಿ ಗಳಿಸಿದೆ. ನಶಿಸಿಹೋಗುತ್ತಿದ್ದ ನಾಟಕ ಕಲೆ ಉಳಿವಿಗೆ ಶ್ರೀಗಳ ಶ್ರಮ ಇದೆ. ಶರಣ ಸಂಸ್ಕೃತಿ ಕಟ್ಟಿಕೊಡುವಲ್ಲಿ ನಾಟಕೋತ್ಸವ ಯಶಸ್ವಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ ವಿಚಾರದ ಬಗ್ಗೆ ವಿವರಿಸಿದರು. ಸಿಂದಗಿ ಕ್ಷೇತ್ರದಲ್ಲಿ 30 ಸಾವಿರ ಅಂತರದಲ್ಲಿ ಬಿಜೆಪಿ ಗೆದ್ದಿದೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಈ ಬಗ್ಗೆ ಕಾರ್ಯಕರ್ತರು, ಮುಖಂಡರ ಜೊತೆಗೆ ಸಮಾಲೋಚನೆ ಮಾಡುತ್ತೇನೆ. ಹಾನಗಲ್​​ನಲ್ಲಿ ಹಿನ್ನಡೆಗೆ ಕಾರಣ ಹುಡುಕುವ ಪ್ರಯತ್ನ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಹಾನಗಲ್ ಉಪಚುನಾವಣೆ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ: ಬಿಎಸ್ ಯಡಿಯೂರಪ್ಪ ಇದನ್ನೂ ಓದಿ: ಕರ್ನಾಟಕ ರಾಜ್ಯೋತ್ಸವ 2021: ನಾಡಿನ ಸಮಸ್ತ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ