ಪಂಚಾಯಿತಿಗೊಂದು ಬಾರ್ ವಿವಾದದ ಬಗ್ಗೆ ಸಿಎಂ, ಡಿಸಿಎಂ ಸ್ಪಷ್ಟನೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ

ಗ್ರಾಮ ಪಂಚಾಯಿತಿಯೊಂದು ಬಾರ್​ ತೆಗೆಯುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದರಿಂದ ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುವ ನಿರ್ಧಾರವನ್ನು ಕೈಬಿಟ್ಟಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಿಎಂ, ಡಿಸಿಎಂ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ನೋಡಿ.

ಪಂಚಾಯಿತಿಗೊಂದು ಬಾರ್ ವಿವಾದದ ಬಗ್ಗೆ ಸಿಎಂ, ಡಿಸಿಎಂ ಸ್ಪಷ್ಟನೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್Image Credit source: PTI
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 06, 2023 | 2:44 PM

ಚಿತ್ರದುರ್ಗ, (ಅಕ್ಟೋಬರ್ 06): ಗ್ಯಾರಂಟಿ ಯೋಜನೆಗಳ ಆರ್ಥಿಕ ಭಾರದಿಂದ ನಲುಗುತ್ತಿರುವ ಸಿದ್ದರಾಮಯ್ಯನವರ (Siddaramaiah) ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್‌ ಹಾಗೂ ಸೂಪರ್‌ ಮಾರ್ಕೆಟ್‌ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ(liquor shops) ಪರವಾನಗಿ ನೀಡಲು ಚಿಂತನೆ ನಡೆಸಿದೆ ಎನ್ನುವ ಸುದ್ದಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇಂದು (ಅಕ್ಟೋಬರ್ 06) ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ. ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಇದನ್ನೂ ಓದಿ: ಗ್ಯಾರಂಟಿ ನಷ್ಟ ಭರಿಸೋಕ್ಕೆ ಸರ್ಕಾರದಿಂದ ಹೊಸ ಪ್ಲಾನ್‌; ಮಾಲ್‌, ಸೂಪರ್‌ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟ

ಮತ್ತೊಂದೆಡೆ ಇದೇ ವಿಚಾರವಾಗಿ ರಾಮನಗರದ ಕುದೂರಿನಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್​ಗಳನ್ನು ತೆರೆಯಲಾಗುವುದು. ಕುಡಿಯುವುದನ್ನು ಯಾರೂ ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಎಚ್ಚರಿಕೆ ನೀಡಿದ್ದ ಸ್ವಪಕ್ಷದ ಶಾಸಕ

ಈ ಬಗ್ಗೆ ಇತ್ತೀಚೆಗೆ ಮಾತನಾಡಿದ್ದ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್, ಪಾಪದ ಹಣದಲ್ಲಿ ಸರ್ಕಾರ ನಡೆಸುವ ಅಗತ್ಯವಿಲ್ಲ. ಮದ್ಯದ ಅಂಗಡಿಗಳನ್ನು ಯಾವ ಪುರುಷಾರ್ಥಕ್ಕೆ ಹೆಚ್ಚಿಸುತ್ತಿದ್ದಾರೆ? ಸರ್ಕಾರ ನಡೆಸಲು ಆರ್ಥಿಕ ಸಮಸ್ಯೆಗಳಿದ್ದರೆ ಬೇರೆ ಮಾರ್ಗ ಹುಡುಕಿ. ಶ್ರೀಮಂತರಿಗೆ ಯಾಕೆ ಉಚಿತ ಯೋಜನೆ ಕೊಡುತ್ತಿದ್ದಾರೋ ಗೊತ್ತಿಲ್ಲ. ನನ್ನಂತಹವರಿಗೆ ಉಚಿತ ವಿದ್ಯುತ್ ನೀಡುವ ಅಗತ್ಯವೇನು? ಸಿದ್ದರಾಮಯ್ಯ ಆರ್ಥಿಕ ತಜ್ಞರು, ಮ್ಯಾನೇಜ್ ಮಾಡುವ ನಂಬಿಕೆ ಇದೆ. ಈ ವಿಚಾರವನ್ನು ಶಾಸಕರ ಸಭೆ, ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಒಂದು ವೇಳೆ ಸರ್ಕಾರ ಈ ನಿರ್ಣಯದಿಂದ ಹಿಂದೆ ಸರಿಯದಿದ್ದರೆ ನಾನೇ ಹೋರಾಟ ನಡೆಸುವೆ ಎಂದು ಎಚ್ಚರಿಕೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Fri, 6 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್