ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ

ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಣ್ಣು ಹಂಚುವ ವಿಚಾರಕ್ಕೆ ಸಹಪಾಠಿ ಜತೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಸಹಪಾಠಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದರಿಂದ ಮನನೊಂದು ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ
Kotresh
Edited By:

Updated on: Feb 16, 2026 | 2:46 PM

ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್​​ಗೆ ಬಟ್ಟೆ, ಹಣ್ಣು ಕೊಡಿಸಿದ್ದು, ಆದ್ರೆ, ಹಣ್ಣು ಹಂಚುವ ವಿಚಾರದಲ್ಲಿ ಕೊಟ್ರೇಶ್ ಹಾಗೂ ಸಹಪಾಠಿ ಜತೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸಹಪಾಠಿ, ಕೊಟ್ರೇಶ್​​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಗಲಾಟೆ ಬಗ್ಗೆ ಮಾಹಿತಿ ನೀಡಿಲ್ಲ. ಶಾಲಾ ಸಿಬ್ಬಂದಿ, ಆಡಳಿತ ಮಂಡಳಿ ನಿರ್ಲಕ್ಷ್ಯ ಎಂದು ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!

ಇನ್ನು ಈ ಬಗ್ಗೆ ಡಿವಿಎಸ್ ವಸತಿ ಶಾಲೆ ಮುಖ್ಯಸ್ಥ ಪ್ರದೀಪ್ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಗಳು ಸಣ್ಣಪುಟ್ಟ ಜಗಳ ಮಾಡಿಕೊಂಡಿದ್ದಾರೆ. ವಾರ್ಡನ್ ಸರಿಪಡಿಸಿ ಶಿವರಾತ್ರಿ ಪ್ರಯುಕ್ತ ಸಿನೆಮಾ ತೋರಿಸಿದ್ದಾರೆ. ಬೆಳಗ್ಗೆ ಎದ್ದು ಕೊಟ್ರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯಾವ ರೀತಿ ಮಾನಸಿಕವಾಗಿ ತೆಗದುಕೊಂಡಿದ್ದನೋ ಗೊತ್ತಿಲ್ಲ. ಪೋಷಕರು ಭರಮಸಾಗರ ಠಾಣೆಗೆ ದೂರು ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿಯಿಂದ ತನಿಖೆಗೆ ಸಹಕಾರ ನೀಡಲಾಗುತ್ತೆ. ಕೊಟ್ರೇಶ್ ಪೋಷಕರ ದೂರಿನಂತೆ ಹಲ್ಲೆ ಏನು ನಡೆದಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us