ಗೋವಾ ಹೋಟೆಲ್​ನಲ್ಲಿ ಮಗು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅರೆಸ್ಟ್

ಗೋವಾದ ಹೋಟೆಲ್​ವೊಂದರಲ್ಲಿ ಮಗುವಿನ ಹತ್ಯೆ ಮಾಡಿದ ಆರೋಪದ ಮೇಲೆ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಈ ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗುತ್ತೆ.

ಗೋವಾ ಹೋಟೆಲ್​ನಲ್ಲಿ ಮಗು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅರೆಸ್ಟ್
ಐಮಂಗಲ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on:Jan 09, 2024 | 9:58 AM

ಚಿತ್ರದುರ್ಗ, ಜ.09: ಗೋವಾದ ಹೋಟೆಲ್​ವೊಂದರಲ್ಲಿ ಮಗುವಿನ ಹತ್ಯೆ (Murder) ಮಾಡಲಾಗಿದೆ ಎಂಬ ಆರೋಪದ ಮೇಲೆ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ (Suchana Seth) ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋವಾದ ಹೋಟೆಲ್​ನಲ್ಲಿ ತಂಗಿದ್ದ ಸುಚನಾ ಸೇಠ್ ಅವರು ಹೋಟೆಲ್​ನಲ್ಲಿ ತಮ್ಮ ಮಗನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸುಚನಾ ಸೇಠ್, ಸೂಟ್ ಕೇಸ್​ನಲ್ಲಿ ಮಗುವಿನ ಶವ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿಮಾನಿ ಬೈಕ್​ಗೆ ನಟ ಯಶ್​ ಬೆಂಗಾವಲು ವಾಹನ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಸಾವು

ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಟ್ಯಾಕ್ಸಿ ಡ್ರೈವರ್

ಇನ್ನು ಹೋಟೆಲ್ ಸಿಬ್ಬಂದಿ ಗೋವಾ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ. ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದು ಐಮಂಗಲ ಪೊಲೀಸರಿಗೆ ಆರೋಪಿ ಸುಚನಾಳನ್ನು ಒಪ್ಪಿಸಿದ್ದಾರೆ. ಕಾರ್​ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿ ಆರೋಪಿ ಸುಚನಾಳನ್ನ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗುತ್ತೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:58 am, Tue, 9 January 24