ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1: ಕೋಟೆನಾಡಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಮೀಸಲಾತಿ ವಿಚಾರದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1: ಕೋಟೆನಾಡಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ಕಾಂಗ್ರೆಸ್ ನಾಯಕ​​ ರಾಹುಲ್ ಗಾಂಧಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 10, 2022 | 7:27 PM

ಚಿತ್ರದುರ್ಗ: ದೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಂ1 ಭ್ರಷ್ಟ ಸರ್ಕಾರ. 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರ ಎಂದು ಕಾಂಗ್ರೆಸ್ ನಾಯಕ​​ ರಾಹುಲ್ ಗಾಂಧಿ ಹೇಳಿದರು. ಕೋಟೆನಾಡಿನ ಹರ್ತಿಕೋಟೆ ಗ್ರಾಮದ ಬಳಿ ಜನರನ್ನುದ್ದೇಶಿಸಿ ಭಾಷಣ ಮಾಡಿದರು. ಬಿಜೆಪಿ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 80 ಲಕ್ಷಕ್ಕೆ ಪಿಎಸ್​ಐ ಹುದ್ದೆ ಮಾರಾಟ ಆಗುತ್ತಿದೆ ಎಂದು ಬಿಜೆಪಿ ಸರ್ಕಾರ ವಿರುದ್ಧ ಗುಡುಗಿದರು. ಭಾರತ್ ಜೋಡೋ ಯಾತ್ರೆ ದ್ವೇಷ ಮತ್ತು ಅಸೂಯೆಯ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಐಕ್ಯತೆಯ ಭಾರತವನ್ನೂ ಯಾರೂ ವಿಭಜಿಸಲು ಅಸಾಧ್ಯ. ಪ್ರೀತಿ, ವಿಶ್ವಾಸ ಒಂದು ಕಡೆ ಮತ್ತೊಂದು ಕಡೆ ದ್ವೇಷ ಇದೆ. ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಕಂಡಿದ್ದೇವೆ. ನಿರುದ್ಯೋಗ ಸಮಸ್ಯೆ ದೇಶವನ್ನು ಕಾಡುತ್ತಿದೆ. ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ತಾಯಂದಿರು ಯಾತ್ರೆಯಲ್ಲಿ ಭೇಟಿ ಆಗುತ್ತಾರೆ. ಗ್ಯಾಸ್ ಸಿಲಿಂಡರ್ ದುಬಾರಿ ಆಗಿದ್ದರ ಬಗ್ಗೆ ಕೇಳುತ್ತಾರೆ. ವ್ಯಾಪಾರಿಗಳು ಜಿಎಸ್​ಟಿ ಬಗ್ಗೆ ಕೇಳುತ್ತಾರೆ ಎಂದು ಹೇಳಿದರು.

ಪ್ರತಿಯೊಂದು ಹುದ್ದೆಯನ್ನು ಮಾರಾಟಕ್ಕಿಟ್ಟಿದ್ದಾರೆ

ಸಹಾಯಕ ಪ್ರಾಧ್ಯಾಪಕರು, ಇಂಜಿನಿಯರ್ ಹುದ್ದೆ ಮಾರಾಟಕ್ಕೆ ಇಟ್ಟಿದೆ. ಬೆಲೆ ಏರಿಕೆ, ನಿರುದ್ಯೋಗದಿಂದ ಜನ ಬೇಸತ್ತಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಈ‌ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ. ಇನ್ನಾದರೂ ತ್ವರಿತವಾಗಿ ಜಾರಿ ಮಾಡಲಿ. ನಿರುದ್ಯೋಗ, ಹಸಿವು, ಬೆಲೆ ಏರಿಕೆ, ರೈತರು, ಸಣ್ಣಪುಟ್ಟ ಉದ್ದಿಮೆದಾರರು, ಕಾರ್ಮಿಕರ ಹಿತದೃಷ್ಟಿಯಿಂದ ಈ ಯಾತ್ರೆ ನಡೆಸುತ್ತಿದ್ದೇವೆ. ಯಾತ್ರೆ ಉದ್ದಕ್ಕೂ‌ ಎಲ್ಲರೂ ನಷ್ಟದಲ್ಲಿರುವ ಬಗ್ಗೆ ಹೇಳುತ್ತಿದ್ದಾರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವ ಸಹಕಾರ ನೀಡುತ್ತಿಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದರು.

ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ

ಮೀಸಲಾತಿ ವಿಚಾರದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ. ನಾಗಮೋಹನದಾಸ್ ಕಮಿಟಿ ವರದಿ ಜಾರಿ ಬರಬೇಕು ಅಂತ ಕಾಂಗ್ರೆಸ್ ಹೋರಾಟ ಮಾಡಿತ್ತು. ಎಸ್.ಟಿ ಮೀಸಲಾತಿ ನೀಡಬೇಕು ಎನ್ನೋದು ಕಾಂಗ್ರೆಸ್ ಆಗ್ರಹವಾಗಿತ್ತು. 3.5% ನಿಂದ 7% ಏರಿಕೆ ಆಗಬೇಕು ಅನ್ನೋದು ಕಾಂಗ್ರೆಸ್ ಆಗ್ರಹವಾಗಿತ್ತು. ಎರಡೂವರೆ ವರ್ಷ ಬಿಜೆಪಿಯವರು ಏನನ್ನೂ ಮಾಡಲಿಲ್ಲ. ನಾಗ ಮೋಹನ್ ದಾಸ್ ವರದಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕ್ರಿಯೆಯನ್ನೇ ತೋರಿಸಲಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:26 pm, Mon, 10 October 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ