ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಕೇಳುವ ದುಸ್ಥಿತಿ ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎದುರಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಈ ಸರ್ಕಾರಿ ಶಾಲೆಯಲ್ಲಿ 8 ಕೊಠಡಿಗಳ ಹಂಚುಗಳಿಗೆ ಹಾನಿಯಾಗಿರುವ ಹಿನ್ನೆಲೆ, ಶಾಲಾ ಆವರಣದಲ್ಲಿರುವ ಮರದ ನೆರಳಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.
130 ವರ್ಷ ಪುರಾತನವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, 8 ಕೊಠಡಿಗಳ ಹಂಚು ಬಿದ್ದಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಾಗಿದೆ. 3 ಕೊಠಡಿಗಳಷ್ಟೇ ಸುಸ್ಥಿತಿಯಲ್ಲಿದ್ದು ವಿದ್ಯಭ್ಯಾಸಕ್ಕೆ ಸಮಸ್ಯೆಯಾಗಿದೆ. 8 ಶಿಕ್ಷಕರಿರುವ ಈ ಶಾಲೆಯ ಸ್ಥಿತಿ ಶೋಚನೀಯವಾಗಿದೆ.
ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು
ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್ಪಿಜಿ ಉಳಿತಾಯ ಜಿಎಸ್ಕೆ ಕಿಟ್ ತಯಾರಿ
Published On - 8:20 am, Wed, 27 October 21