Mid day meals: ಬಿಸಿಯೂಟ ಸೇವಿಸಿದ್ದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ನಾಲ್ವರು ಗಂಭೀರ
Bisi Uta: ಅಸ್ವಸ್ಥರಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರದುರ್ಗ: ಬಿಸಿಯೂಟ (Bisi Uta) ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ತಾಲೂಕಿನ (Chitradurga taluk) ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥರಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.