ಚಿತ್ರದುರ್ಗ: ಮುರುಘಾಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ; ಸಮಿತಿ ರಚನೆಗೆ ಸೂಚನೆ
ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ, ಮುರುಘಾ ಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದೆ.
ಚಿತ್ರದುರ್ಗ, ಫೆ.27: ಫೋಕ್ಸೋ (POCSO) ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ (Murugha Mutt) ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು (Dr. Sri Shivamurthy Murugha Sharanaru) ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ.
ಎಸ್ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು.
ಇದನ್ನೂ ಓದಿ: ಎಫ್ಐಆರ್ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್
ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ