ವೈಚಾರಿಕ ಬೆಳವಣಿಗೆ ಸಹಿಸದೇ ಮುರುಘಾ ಶರಣರ ವಿರುದ್ಧ ಷಡ್ಯಂತ್ರ: ಶರಣರು ಆರೋಪ ಮುಕ್ತರಾಗಿ ಹೊರಬರುತ್ತಾರೆ -ರಾಮನಗರದ ಮುಮ್ಮಡಿ ಶಿವರುದ್ರಸ್ವಾಮಿ

ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿಗಳು, ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುರುಘಾ ಶರಣರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ.

ವೈಚಾರಿಕ ಬೆಳವಣಿಗೆ ಸಹಿಸದೇ ಮುರುಘಾ ಶರಣರ ವಿರುದ್ಧ ಷಡ್ಯಂತ್ರ: ಶರಣರು ಆರೋಪ ಮುಕ್ತರಾಗಿ ಹೊರಬರುತ್ತಾರೆ -ರಾಮನಗರದ ಮುಮ್ಮಡಿ ಶಿವರುದ್ರಸ್ವಾಮಿ
ಮುರಘಾ ಮಠ ಸ್ವಾಮಿಜಿ
Follow us
TV9 Web
| Updated By: ಆಯೇಷಾ ಬಾನು

Updated on:Aug 30, 2022 | 3:22 PM

ಚಿತ್ರದುರ್ಗ: ಜಿಲ್ಲೆಯ ಮುರುಘರಾಜೇಂದ್ರ ಬೃಹನ್ಮಠ (ಮುರುಘಾಮಠ) ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮತ್ತೊಂದೆಡೆ ಇಂದು ಸಂತ್ರಸ್ತರು ನ್ಯಾಯಾಲಯದಲ್ಲಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಲಿದ್ದಾರೆ. ಇದರ ನಡುವೆ ಚಿತ್ರದುರ್ಗದ ಮುರುಘಾಮಠದಲ್ಲಿ ಸ್ವಾಮೀಜಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಾಂತವೀರಶ್ರೀ, ಮಾದಾರ ಚನ್ನಯ್ಯಶ್ರೀ, ಮಾಚಿದೇವಶ್ರೀ ಸೇರಿ 20ಕ್ಕೂಹೆಚ್ಚು ಮಠಾಧೀಶರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿಗಳು, ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುರುಘಾ ಶರಣರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂದು ರಾಮನಗರ ಜಿಲ್ಲೆ ಮರಳಗವಿ ಮಠದ ಮುಮ್ಮಡಿ ಶಿವರುದ್ರಸ್ವಾಮಿ ತಿಳಿಸಿದ್ದಾರೆ.

ವೈಚಾರಿಕ ಬೆಳವಣಿಗೆ ಸಹಿಸದೇ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಪಟ್ಟಭದ್ರ ಹಿತಾಸಕ್ತಿಗಳಿಂದ ಶ್ರೀಮಠಕ್ಕೆ ಕಪ್ಪು ಮಸಿ ಬಳಿಯುವ ಯತ್ನ ನಡೆದಿದೆ. ವೈಚಾರಿಕ ಕ್ರಾಂತಿಯಿಂದ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ. ಇದನ್ನು ಸಹಿಸದ ಕೆಲವು ಶಕ್ತಿಗಳಿಂದ ಷಡ್ಯಂತ್ರ ನಡೆಯುತ್ತಿದೆ ಎಂದರು. ಇದನ್ನೂ ಓದಿ: CRPC 164: ಸಿಆರ್​ಪಿಸಿ 164ರ ಅಡಿ ಹೇಳಿಕೆ ದಾಖಲಾದರೆ ಕಾನೂನಿನ ಕುಣಿಕೆ ಬಿದ್ದಂತೆಯೇ ಸರಿ; ಮುರುಘಾ ಶ್ರೀಗಳ ಬಗ್ಗೆ ಬಾಲಕಿಯರ ಹೇಳಿಕೆಗೆ ಇಷ್ಟೇಕೆ ಪ್ರಾಮುಖ್ಯತೆ?

ಶ್ರೀಗಳಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಮುರುಘಾ ಶ್ರೀಗಳು ತಪ್ಪು ಮಾಡಿಲ್ಲ, ಅವರು ನಿರಪರಾಧಿ. ಶಿವಮೂರ್ತಿ ಮುರಘಾ ಶರಣರು ಆರೋಪಮುಕ್ತರಾಗುತ್ತಾರೆ. ಮುರುಘಾ ಶ್ರೀಗಳು ವೈಚಾರಿಕ ಕ್ರಾಂತಿಯಿಂದ ಕೂಡಿದವರು. ಸ್ವಾಮೀಜಿಗೆ ಎಲ್ಲ ಮಠಾಧೀಶರು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಸತ್ಯವೇ ಜಯವಾಗುತ್ತೆ, ಶ್ರೀಗಳು ಆರೋಪ ಮುಕ್ತರಾಗುತ್ತಾರೆ. ಮಠದ ಅಭಿವೃದ್ಧಿಗೆ ಶಿವಮೂರ್ತಿ ಮುರುಘಾ ಶರಣರು ಶ್ರಮಿಸ್ತಾರೆ. ಶ್ರೀಗಳ ಹೋರಾಟಕ್ಕೆ ನಮ್ಮ ಬೆಂಬಲ, ಸಹಕಾರ ಇರುತ್ತದೆ. ಮಕ್ಕಳು ದೇವರ ಸಮಾನ, ಮಕ್ಕಳ ಬಗ್ಗೆ ನಮಗೆ ಗೌರವವಿದೆ. ಪ್ರಕರಣದ ತನಿಖೆಯ ನಂತರ ಸತ್ಯಾಂಶ ಬಯಲಾಗುತ್ತದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಏನೂ ಹೇಳಲಾಗಲ್ಲ. ದಯವಿಟ್ಟು ಎಲ್ಲರೂ ಕ್ಷಮಿಸಬೇಕು ಎಂದರು.

ಮುರಘಾಶ್ರೀ ಬಂಧನಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ

ಮತ್ತೊಂದು ಕಡೆ ಮುರುಘಾಶ್ರೀ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದೆ. ಬಾಲಮಂದಿರದ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಬಾಲಮಂದಿರದ ಮುಂದೆ ಪ್ರತಿಭಟನೆ ನಡೆಸದಂತೆ ಸೂಚಿಸಿದ್ದಾರೆ. ಈ ವೇಳೆ ಪೊಲೀಸ್​ ಅಧಿಕಾರಿಗಳ ಜೊತೆ ಪ್ರತಿಭಟನಾಕಾರರ ವಾಗ್ವಾದ ನಡೆದಿದೆ. ಚಿತ್ರದುರ್ಗದ ಬಾಲಮಂದಿರ ಬಳಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಹೆಚ್ಚುವರಿಯಾಗಿ ಮತ್ತೊಂದು ಡಿಎಆರ್ ತುಕುಡಿ ನಿಯೋಜನೆ ಮಾಡಲಾಗಿದೆ.

Published On - 2:39 pm, Tue, 30 August 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ