ಚಿತ್ರದುರ್ಗ: ಸಿಬಾರ ಗ್ರಾಮದ ಬಳಿ ಭೀಕರ ಅಪಘಾತ, ಲಾರಿ – ಟ್ರಕ್ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಮೃತಟ್ಟಿದ್ದಾರೆ. ಚಿತ್ರದುರ್ಗದ ಸಿಬಾರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಹೊಡೆದಿದ್ದರಿಂದ ಘಟನೆ ಸಂಭವಿಸಿದೆ.

ಚಿತ್ರದುರ್ಗ: ಸಿಬಾರ ಗ್ರಾಮದ ಬಳಿ ಭೀಕರ ಅಪಘಾತ, ಲಾರಿ - ಟ್ರಕ್ ಡಿಕ್ಕಿಯಾಗಿ ಮೂವರು ಸಾವು
ಸಿಬಾರ ಗ್ರಾಮದ ಬಳಿ ಭೀಕರ ಅಪಘಾತ
Edited By:

Updated on: Mar 05, 2025 | 9:54 AM

ಚಿತ್ರದುರ್ಗ, ಮಾರ್ಚ್​ 5: ಚಿತ್ರದುರ್ಗ (Chitradurga) ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೂವರು ಮೃತಪಟ್ಟಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿಯೊಂದು ಟೈರ್ ಸ್ಫೋಟಗೊಂಡ ಪರಿಣಾಮ ರಸ್ತೆ ಬದಿ ನಿಂತಿತ್ತು. ಚಾಲಕ ಅದರಿಂದ ಇಳಿದು ಬೇರೆ ಟೈರ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟರಲ್ಲಿ, ಹೆದ್ದಾರಿಯಲ್ಲಿ ಬಂದ ಮತ್ತೊಂದು ಲಾರಿ ಅದಕ್ಕೆ ಡಿಕ್ಕಿಯಾಗಿದೆ. ಹಿಂದಿನಿಂದ ಬಂದ ಟ್ರಕ್ ಕೂಡ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಇದನ್ನೂ ಓದಿ
ರಾಜ್ಯ ಸರ್ಕಾರ ಗೂಂಡಾಗಳ ನಟ್ಟು ಬೋಲ್ಟು ಟೈಟ್ ಮಾಡಲಾರದೇ?
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗೆ ಮತ್ತೊಂದು ಹೊಸ ಸಂಕಷ್ಟ, ಏನದು?
ಗೃಹಲಕ್ಷ್ಮಿ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್ ಉಡಾಫೆ ಉತ್ತರ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 am, Wed, 5 March 25