AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಶವ ಕೊಂಡೊಯ್ಯುತ್ತಿದ್ದ ಕಾರಿನ ಟೈರ್ ಸ್ಫೋಟ, ಮೂವರು ದುರ್ಮರಣ

ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.

ಚಿತ್ರದುರ್ಗ: ಶವ ಕೊಂಡೊಯ್ಯುತ್ತಿದ್ದ ಕಾರಿನ ಟೈರ್ ಸ್ಫೋಟ, ಮೂವರು ದುರ್ಮರಣ
TV9 Web
| Edited By: |

Updated on:Jan 19, 2024 | 6:28 PM

Share

ಚಿತ್ರದುರ್ಗ, (ಜನವರಿ 19): ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ. ಮೃತ ವೃದ್ಧೆಯ ಶವವನ್ನು ಬೆಂಗಳೂರಿಂದ ಬಳ್ಳಾರಿಯ (Bellary) ಸಿರಗುಪ್ಪಕ್ಕೆ ಕೊಂಡೊಯ್ಯುವಾಗ ವೇಳೆ ರಾಂಪುರ ಗ್ರಾಮ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.  ಸುರೇಶ್(40), ಮಲ್ಲಿಕಾರ್ಜುನ(25), ಭೂಮಿಕಾ(9) ಮೃತ ದುರ್ವೈವಿಗಳು. ಮೃತರು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ದೇಸನೂರು ನಿವಾಸಿಗಳು ಎಂದು ತಿಳಿದುಬಂದಿದೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹುಲಿಗೆಮ್ಮ(66) ಎನ್ನುವರು ಬೆಂಗಳೂರಿನ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದರು. ಹೀಗಾಗಿ ಕಾರಿನಲ್ಲಿ ಹುಲಿಗೆಮ್ಮನ ಮೃತದೇಹವನ್ನು ಬೆಂಗಳೂರಿನಿಂದ ದೇಸನೂರು ಸಾಗಿಸಲಾಗುತ್ತಿತ್ತು. ಆದ್ರೆ, ಮಾರ್ಗ ಮಧ್ಯೆ ಟೈರ್​ ಸ್ಫೋಟಗಗೊಂಡು ಕಾರು ಪಲ್ಟಿಯಾಗಿದೆ.ಈ ಹಿನ್ನೆಲೆಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ನಾಗಮ್ಮ, ತಾಯಮ್ಮ, ಧನರಾಜ್, ಕಾರು ಚಾಲಕ ಶಿವು ಸ್ಥಿತಿ ಗಂಭೀರವಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತ ಸಾವು

ಹುಬ್ಬಳ್ಳಿ: ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಕೃಷಿ ಕಾರ್ಮಿಕ (Electric shock) ದಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಾದೇವಪ್ಪ ಹಂಗರಕಿ (62) ಮೃತ ಕೃಷಿ ಕಾರ್ಮಿಕ. ಮಾದೇವಪ್ಪ ಅವರು ಅನ್ವರ್ ಬೇಪಾರಿ ಎನ್ನುವವರ ಕಬ್ಬಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪಂಪ್‌ಸೆಟ್‌‌ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಟ್ ಆಗಿತ್ತು. ಆದರೆ ಇದನ್ನು ಗಮನಿಸಿದ ಮಾದೇವಪ್ಪ ವಿದ್ಯುತ್ ತಂತಿ ತುಳಿದಾಗ ಕ್ಷಣಾರ್ಧದಲ್ಲೇ ವಿದ್ಯುತ್‌ ಪ್ರವಹಿಸಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:39 pm, Fri, 19 January 24

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್