ಮೊಳಕಾಲ್ಮೂರು ಬಳಿ ಕಾರುಗಳ ಡಿಕ್ಕಿ: ಬಳ್ಳಾರಿ ಮಹಿಳಾ ಹೆಡ್ ​ಕಾನ್ಸ್​​ಟೇಬಲ್​, ಉಪನ್ಯಾಸಕ ಸಾವು​

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಮೊಳಕಾಲ್ಮೂರು ಬಳಿ ಕಾರುಗಳ ಡಿಕ್ಕಿ: ಬಳ್ಳಾರಿ ಮಹಿಳಾ ಹೆಡ್ ​ಕಾನ್ಸ್​​ಟೇಬಲ್​, ಉಪನ್ಯಾಸಕ ಸಾವು​
ಮೊಳಕಾಲ್ಮೂರು: ಕಾರುಗಳ ಡಿಕ್ಕಿ, ಬಳ್ಳಾರಿ ಮಹಿಳಾ ಹೆಡ್ ​ಕಾನ್ಸ್​​ಟೇಬಲ್​, ಉಪನ್ಯಾಸಕ ಸಾವು​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 16, 2021 | 8:44 AM

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಬಳ್ಳಾರಿ ಮಹಿಳಾ ಠಾಣೆಯ ಹೆಡ್ ​ಕಾನ್ಸ್​​ಟೇಬಲ್ (WPC ) ಟಿಪ್ಪು ಸುಲ್ತಾನ್ (42) ಮತ್ತು ಮತ್ತೊಂದು ಕಾರಿನಲ್ಲಿದ್ದ ಬಳ್ಳಾರಿ ಮೂಲದ ಉಪನ್ಯಾಸಕ ಸುರೇಶ್ (58) ಸಾವಿಗೀಡಾಗಿದ್ದಾರೆ. ಸುರೇಶ್ ಪತ್ನಿ ಪಾರ್ವತಮ್ಮಗೆ ಗಾಯಗಳಾಗಿದ್ದು,‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ಗೆ ಬೆಂಕಿ: 22 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೊಡ ಕೆರೆ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಭಸ್ಮವಾಗಿದೆ. ಮುಂಬಯಿಯಿಂದ ಮಂಗಳೂರು ಕಡೆ ಬಸ್ ಸಂಚರಿಸುತ್ತಿತ್ತು. ಬಸ್ ನಲ್ಲಿ ಇದ್ದ ಸುಮಾರು 22 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೆಲ ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ: ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಉಜ್ಜಿಕೊಂಡು ಬೆಂಕಿ ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಪರಸ್ಪರ ಉಜ್ಜಿಕೊಂಡು ಬೆಂಕಿಗೆ ಆಗುತಿಯಾಗಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿರುಪಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿಗಳು ಹೊತ್ತಿ ಉರಿದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 8:04 am, Thu, 16 December 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?