ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ
ಚಿತ್ರದುರ್ಗ: ಹಿರಿಯೂರು ಪಟ್ಟಣ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹೂವಿನಹಡಗಲಿ ಮೂಲದ ಅಂದಾನಪ್ಪ(45), ಚಾಲಕ ಇಮ್ರಾನ್ ಪಾಶಾ(30) ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಬಳಿಕ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅಂದಾನಪ್ಪ ಸಂಬಂಧಿಕರನ್ನು ಬೆಂಗಳೂರಿಗೆ ಡ್ರಾಪ್ ನೀಡಿ ಮರಳುವ ವೇಳೆ ಅಪಘಾತ ಸಂಭವಿಸಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ: ಹಿರಿಯೂರು ಪಟ್ಟಣ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹೂವಿನಹಡಗಲಿ ಮೂಲದ ಅಂದಾನಪ್ಪ(45), ಚಾಲಕ ಇಮ್ರಾನ್ ಪಾಶಾ(30) ಮೃತ ದುರ್ದೈವಿಗಳು.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಬಳಿಕ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅಂದಾನಪ್ಪ ಸಂಬಂಧಿಕರನ್ನು ಬೆಂಗಳೂರಿಗೆ ಡ್ರಾಪ್ ನೀಡಿ ಮರಳುವ ವೇಳೆ ಅಪಘಾತ ಸಂಭವಿಸಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.