ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇತ್ತ ನಾಲ್ವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗದಲ್ಲಿ ಬಸ್​, ಆಟೋ ಡಿಕ್ಕಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 5:50 PM

ಚಿತ್ರದುರ್ಗ, ಸೆ.17: ಆಟೋಗೆ ಖಾಸಗಿ ಬಸ್ (private Bus) ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ರಾಮಜೋಗಿಹಳ್ಳಿ ಬಳಿ ನಡೆದಿದೆ. ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇತ್ತ ನಾಲ್ವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾವೇರಿ ಪಟಾಕಿ ದುರಂತ ಪ್ರಕರಣ; 15 ಕಡೆ ಮಾತ್ರ ಪಟಾಕಿ ಮಾರಲು ಸ್ಥಳ ನಿಗದಿ

ಹಾವೇರಿ: ತಾಲೂಕಿನ ಆಲದಕಟ್ಟಿಯಲ್ಲಿ ಪಟಾಕಿ ದುರಂತ ಸಂಭವಿಸಿ ನಾಲ್ಕು ಜನ ಸಜೀವ ದಹನ ಆಗಿದ್ದರು. ಈ ಹಿನ್ನಲೆ ಹಾವೇರಿ ಜಿಲ್ಲಾಡಳಿತ ಗಣೇಶ ಹಬ್ಬಕ್ಕೆ ಮುನ್ನೆಚ್ಚಚರಿಕೆ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ 15 ಕಡೆ ಮಾತ್ರ ಪಟಾಕಿ ಮಾರಲು ಸ್ಥಳ ನಿಗದಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ‘ಅಗ್ನಿಶಾಮಕದಳ, ನಗರಸಭೆ, ಪೊಲೀಸರು ಸ್ಥಳ ನಿಗದಿ ಮಾಡಿದ್ದು, ಎಲ್ಲಾ ಪಟಾಕಿ ಅಂಗಡಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದೇವೆ. ಪಟಾಕಿ ಮಾರಲು 50 ಜನರಿಗೆ ತಾತ್ಕಾಲಿಕ ಲೈಸೆನ್ಸ್​ ನೀಡಲಾಗಿದೆ ಎಂದರು.

ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ, ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿ ಚಾಲಕನ ನರಳಾಟ

‘ಪರವಾನಗಿ ಇಲ್ಲದವರಿಗೆ ಪಟಾಕಿ ಮಾರಲು ಅವಕಾಶ ಇರುವುದಿಲ್ಲ. ಹಾವೇರಿ ಜಿಲ್ಲೆಯಲ್ಲಿ ಐವರಿಗೆ ಪರ್ಮನೆಂಟ್​ ಲೈಸೆನ್ಸ್ ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ನೀಡಲು ಸೂಚನೆ ನೀಡಿದ್ದೇವೆ. ಷರತ್ತು ಒಪ್ಪಿಕೊಂಡು ದಾಖಲೆ ನೀಡಿದರೆ ಮತ್ತೆ ಲೈಸೆನ್ಸ್​ ಕೊಡುತ್ತೇವೆ ಎಂದು ಹಾವೇರಿಯಲ್ಲಿ ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Loading...
Unable to load recommendations.
Follow Us