ಚಿತ್ರದುರ್ಗ: ನ್ಯಾಯಬೆಲೆ ಅಂಗಡಿಯ ಮಹಿಳೆಗೆ ಬ್ಲ್ಯಾಕ್​ಮೇಲ್​! 50 ಸಾವಿರಕ್ಕೆ ಬೇಡಿಕೆ ಇಟ್ಟು, 15 ಸಾವಿರ ಹಣ ಪಡೆದ ಆರೋಪ

10 ರೂಪಾಯಿ ಪಡೆದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ ಆರೋಪಿ 50 ಸಾವಿರಕ್ಕೆ ಬೇಡಿಕೆ ಇಟ್ಟು, 15,000 ರೂ. ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿಯ ಮಹಿಳೆಗೆ ಬ್ಲ್ಯಾಕ್​ಮೇಲ್​! 50 ಸಾವಿರಕ್ಕೆ ಬೇಡಿಕೆ ಇಟ್ಟು, 15 ಸಾವಿರ ಹಣ ಪಡೆದ ಆರೋಪ
ಅಂಗಡಿಯ ಮಹಿಳೆಗೆ ಇಬ್ಬರು ಬ್ಲಾಕ್​ಮೇಲೆ ಮಾಡಿದ್ದಾರೆ ಎಂಬ ಆರೋಪವಿದೆ
Follow us
TV9 Web
| Updated By: sandhya thejappa

Updated on:Nov 14, 2021 | 1:46 PM

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ನ್ಯಾಯಬೆಲೆ ಅಂಗಡಿ ಮಹಿಳೆ ರಂಗಮ್ಮಗೆ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಿಳೆ ಗ್ರಾಹಕರಿಂದ ತಲಾ 10 ರೂಪಾಯಿ ಪಡೆದ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

10 ರೂಪಾಯಿ ಪಡೆದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ ಆರೋಪಿ 50 ಸಾವಿರಕ್ಕೆ ಬೇಡಿಕೆ ಇಟ್ಟು, 15,000 ರೂ. ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವಿನಾಶ್ ಮತ್ತು ಪ್ರದೀಪ್ ವಿರುದ್ಧ ರಂಗಮ್ಮ ಗಂಭೀರ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ ಕೇಳಿಬಂದಿದ್ದು, ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನು ಹಣ ಪಡೆಯುತ್ತಿದ್ದ ವಿಡಿಯೋವನ್ನು ವೈರಲ್ ಮಾಡಿತ್ತೇನೆ ಎಂದು ಬೆದರಿಸಿದ ಆರೋಪಿ ಅವಿನಾಶ್, ಮಹಿಳೆಯಿಂದ 15 ಸಾವಿರ ಹಣ ಪಡೆದಿದ್ದ. ರಂಗಮ್ಮ ಮನೆಗೆ ಬಂದು ಪ್ರದೀಪ್ ಹಣ ಪಡೆದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವಿನಾಶ್ ಮತ್ತು ಪ್ರದೀಪ್ ವಿರುದ್ಧ ರಂಗಮ್ಮ ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ. ಈ ವೇಳೆ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಬೆಲೆ ಅಂಗಡಿಯ ರಂಗಮ್ಮ ಮನವಿ ಮಾಡಿದ್ದಾರೆ. ಸದ್ಯ ಈ ಪ್ರಕರಣದ ಬಗ್ಗೆ ದೂರು ದಾಖಲಾಗಿಲ್ಲ.

ಭೀಮ್ ಆರ್ಮಿಯ ಜಿಲ್ಲಾದ್ಯಕ್ಷ ಅವಿನಾಶ್ ಪ್ರತಿಕ್ರಿಯೆ ನೀಡಿ ಭೀಮ್ ಆರ್ಮಿ ಹಾಗೂ ನನ್ನ ವಿರುದ್ಧದ ಆರೋಪ ಸುಳ್ಳು. ನ್ಯಾಯ ಬೆಲೆ ಅಂಗಡಿಯ ರಂಗಮ್ಮ ಹಣ ಪಡೆದದ್ದು ಒಪ್ಪಿಕೊಂಡಿದ್ದಾರೆ. ಚೀಲ ನೀಡಲು 10ರೂ. ಪಡೆದಿದ್ದಾಗಿ ಹೇಳಿದ್ದು ಭ್ರಷ್ಟಾಚಾರ ಒಪ್ಪಿಕೊಂಡಿದ್ದಾರೆ. ನಮ್ಮ ವಿರುದ್ಧ ಷಡ್ಯಂತ್ರ ಮಾಡಿ ನಕಲಿ ಫೇಸ್​​ಬುಕ್ ಖಾತೆ ಮೂಲಕ ಫೇಕ್ ವಿಡಿಯೋ ವೈರಲ್ ಮಾಡಿದ್ದಾರೆ. ಅಪಪ್ರಚಾರ ಮಾಡಿದವರ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವೆ. ಪೊಲೀಸ್ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ ಅಂತ ಹೇಳಿದ್ದಾರೆ.

ಇದನ್ನೂ ಓದಿ

ಬಿಹಾರದ ಪತ್ರಕರ್ತ, ಆರ್‌ಟಿಐ ಕಾರ್ಯಕರ್ತನ ಮೃತದೇಹ ಸುಟ್ಟು ರಸ್ತೆ ಬದಿ ಎಸೆದ ಸ್ಥಿತಿಯಲ್ಲಿ ಪತ್ತೆ

ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ

Published On - 12:22 pm, Sun, 14 November 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?