ಚಿತ್ರದುರ್ಗದ ಮುರುಘಾಶ್ರೀಗೆ ಯುರಿನರಿ ಸೋಂಕು: ಯಾವುದೇ ಸಮಸ್ಯೆ ಇಲ್ಲವೆಂದ ವೈದ್ಯರು
ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾಶ್ರೀಗೆ ಯುರಿನರಿ ಇನ್ಫೆಕ್ಷನ್ ಹಿನ್ನೆಲೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಸ್ಕ್ಯಾನಿಂಗ್ ಮಾಡಿಸಲಾಗಿದೆ. ಸದ್ಯ ಯಾವುದೇ ಸಮಸ್ಯೆ ಇಲ್ಲವೆಂದು ವೈದ್ಯರು ರಿಪೋರ್ಟ್ ನೀಡಿದ್ದಾರೆ.
ಚಿತ್ರದುರ್ಗ, ಸೆಪ್ಟೆಂಬರ್ 14: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾಶ್ರೀಗೆ (Murugha Mutt Shivamurthy Sharanara) ಯುರಿನರಿ ಇನ್ಫೆಕ್ಷನ್ ಹಿನ್ನೆಲೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಸ್ಕ್ಯಾನಿಂಗ್ ಮಾಡಿಸಲಾಗಿದೆ. ಸದ್ಯ ಯಾವುದೇ ಸಮಸ್ಯೆ ಇಲ್ಲವೆಂದು ವೈದ್ಯರು ರಿಪೋರ್ಟ್ ನೀಡಿದ್ದಾರೆ. ಮಧ್ಯಾಹ್ನ ಜಿಲ್ಲಾಸ್ಪತ್ರೆಗೆ ಕರೆತಂದಿದ್ದ ಚಿತ್ರದುರ್ಗ ಕಾರಾಗೃಹದ ಸಿಬ್ಬಂದಿಗಳು, ವೈದ್ಯರಿಂದ ತಪಾಸಣೆ, ಸ್ಕ್ಯಾನಿಂಗ್ ಬಳಿಕ ಮರಳಿ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ.
ಚಿತ್ರದುರ್ಗದ ಮುರುಘಾಮಠ ಕೇವಲ ರಾಜ್ಯ ದೇಶ ಮಾತ್ರವಲ್ಲ ವಿದೇಶದಲ್ಲೂ ತನ್ನದೇ ಆದ ಭಕ್ತರನ್ನು ಹೊಂದಿದೆ. ಮೂಡನಂಬಿಕೆಗಳನ್ನು ಹೋಗಲಾಡಿಸಿ ಸದೃಢ ಸಮಾಜ ನಿರ್ಮಾಣದತ್ತ ಮಠ ಕೆಲಸ ಮಾಡುತಿತ್ತು. ಆ ಮಠಕ್ಕೆ ಕಳಸಪ್ರಾಯದಂತಿದ್ದ ಮಠದ ಪೀಠಾಧಿಪತಿ ಡಾ ಶಿವಮೂರ್ತಿ ಮುರುಘ ಶರಣರ ವಿರುದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಹಿನ್ನಲೆ
ಆಗಸ್ಟ್ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು. ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗ: ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ, ಕರ್ನಾಟಕ ಹೈಕೋರ್ಟ್ ಆದೇಶ
ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಿಗೆ ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನಲೆಯಲ್ಲಿ ಮುರುಘಾ ಶ್ರೀಯನ್ನು ರಾತ್ರಿ ಬಂಧಿಸಲಾಗಿತ್ತು.
ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ತನಿಖೆ ನಡೆಸಿದ ತನಿಖಾಧಿಕಾರಿಗಳು ಮುರುಘಾ ಶ್ರೀ ವಿರುದ್ಧ 694 ಪುಟಗಳ ಚಾರ್ಜ್ಶೀಟ್ನ್ನು ಅಕ್ಟೋಬರ್ 27ರಂದು ಚಿತ್ರದುರ್ಗ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ಇಬ್ಬರು ಬಾಲಕಿಯರಿಂದ ಪ್ರತ್ಯೇಕ ಹೇಳಿಕೆ ಪಡೆಯಲಾಗಿತ್ತು. ಹೀಗಾಗಿ 347 ಪುಟಗಳ ಎ, ಬಿ ಎಂದು 2 ಭಾಗಗಳಾಗಿ ಚಾರ್ಜ್ಶೀಟ್ ಸಲ್ಲಿಸಿಕೆಯಾಗಿದೆ. ಚಿ
ತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿದೆ. ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯಾಗಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ ಅಳವಡಿಕೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:16 pm, Thu, 14 September 23