AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣುಮಕ್ಕಳು ಸ್ವಾಮೀಜಿಗಳ ಬಳಿಗೆ ಹೋಗದ ಸ್ಥಿತಿ ಬಂದಿದೆ: ಸಾಣೆಹಳ್ಳಿಯಲ್ಲಿ ಶಿವಮೂರ್ತಿ ಮುರುಘಾ ಶರಣನ ಬಗ್ಗೆ ಕಿಡಿಕಾರಿದ ಶಾಮನೂರು ಶಿವಶಂಕರಪ್ಪ

ಸರ್ಕಾರದಿಂದ ಸಹಾಯ ಕೇಳುವುದು ನಾಚಿಕೆಗೇಡಿನ ಸಂಗತಿ. ನಾವು ಸ್ವಾಭಿಮಾನದಿಂದ ಇರಬೇಕು, ಸ್ವಂತ ಶಕ್ತಿ ಪ್ರದರ್ಶಿಸಬೇಕು.

ಹೆಣ್ಣುಮಕ್ಕಳು ಸ್ವಾಮೀಜಿಗಳ ಬಳಿಗೆ ಹೋಗದ ಸ್ಥಿತಿ ಬಂದಿದೆ: ಸಾಣೆಹಳ್ಳಿಯಲ್ಲಿ ಶಿವಮೂರ್ತಿ ಮುರುಘಾ ಶರಣನ ಬಗ್ಗೆ ಕಿಡಿಕಾರಿದ ಶಾಮನೂರು ಶಿವಶಂಕರಪ್ಪ
ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 09, 2022 | 8:36 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣನ (Shivamurthy Murugha Sharana) ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗವಾದ ಬಳಿಕ ಲಿಂಗಾಯತ-ವೀರಶೈವ ಸಮಾಜದ ಮುಖಂಡರು ಸಿಟ್ಟಿಗೆದ್ದು ಪ್ರತಿಕ್ರಿಯಿಸುತ್ತಿದ್ದಾರೆ. ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ  (Sanehalli  Theatre Festival) ಸಮಾರಂಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು. ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು. ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಮಾಡುತ್ತದೆ’ ಎಂದರು.

‘ಒಗ್ಗಟ್ಟಿನಲ್ಲಿ ಶಕ್ತಿಯಿದೆ ಎಂಬುದನ್ನು ವೀರಶೈವರು ಅರಿಯಬೇಕು. ಒಳಪಂಗಡಗಳ ಭೇದ ಮರೆತು ವೀರಶೈವರು ಒಂದಾಗಬೇಕು. ಎಲ್ಲರೂ ಸರ್ಕಾರದ ಸಹಾಯ ಕೇಳುತ್ತಿದ್ದಾರೆ. ಸರ್ಕಾರದಿಂದ ಸಹಾಯ ಕೇಳುವುದು ನಾಚಿಕೆಗೇಡಿನ ಸಂಗತಿ. ನಾವು ಸ್ವಾಭಿಮಾನದಿಂದ ಇರಬೇಕು, ಸ್ವಂತ ಶಕ್ತಿ ಪ್ರದರ್ಶಿಸಬೇಕು. ಸರ್ಕಾರದ ಮೇಲೆ ಡಿಪೆಂಡ್ ಆದರೆ ಎಂದಿಗೂ ಯಾವುದೇ ಕೆಲಸ ಆಗುವುದಿಲ್ಲ. ನಾವು ಹತ್ತು ರೂಪಾಯಿ ದುಡಿದರೆ ಒಂದು ರೂಪಾಯಿ ದಾನ-ಧರ್ಮ ಮಾಡಬೇಕು. ದಾನ-ಧರ್ಮದಿಂದಲೇ ನಾವು ಶ್ರೀಮಂತರಾಗಿದ್ದೇವೆ’ ಎಂದು ಹೇಳಿದರು.

ಶಿವಸಂಚಾರ ಕಲಾ ತಂಡಕ್ಕೆ 2 ಕೋಟಿ ಅನುದಾನ

ಸಾಣೇಹಳ್ಳಿಯ ಶಿವಸಂಚಾರ ಕಲಾತಂಡಕ್ಕೆ ₹ 2 ಕೋಟಿ ಅನುದಾನ ನೀಡಲಾಗುವುದು. ಶಿವಕುಮಾರ ರಂಗಶಾಲೆಯನ್ನು ವಿಶ್ವವಿದ್ಯಾಲಯವನ್ನಾಗಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಸಂಚಾರ ರಾಷ್ಟೀಯ ನಾಟಕೋತ್ಸವದ ಸಮಾರೋಪ‌ ಸಮಾರಂಭದಲ್ಲಿ ಮಾತನಾಡಿದ ಅವರು, ಡಾ ಪಂಡಿತಾರಾಧ್ಯ ಸ್ವಾಮೀಜಿ ಅವರ ಶ್ಲಾಘನೀಯ ಕೆಲಸಗಳನ್ನು ಬೆಂಬಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ ತುಂಬಾ ಮುಖ್ಯವಾದುದು. ತಪ್ಪು ಹೆಜ್ಜೆ ಇಟ್ಟರೆ ನಮಗೆ, ಮನೆತನಕ್ಕೆ ಕಷ್ಟವಾಗುತ್ತದೆ. ಗುರುಗಳು ಎಲ್ಲರಿಗೂ ಮಾರ್ಗದರ್ಶನ ಮಾಡುವಂತಿರಬೇಕು. ಡಾ ಪಂಡಿತಾರಾಧ್ಯ ಸ್ವಾಮೀಜಿ ಅವರ ಕರಾರು ರಹಿತ ಪ್ರೀತಿ ಅನುಕರಣೀಯ. ಈಗಿನ ಕಾಲದಲ್ಲಿ ನಾವು ದೇವರ ಜತೆಗೂ ಕರಾರು ಮಾಡಿಕೊಳ್ಳುತ್ತಿದ್ದೇವೆ. ಇಂಥ ಕರಾರುಗಳು ಭಕ್ತಿಯಲ್ಲಿ ಇರಬಾರದು ಎಂದು ಕಿವಿಮಾತು ಹೇಳಿದರು.

Published On - 8:35 am, Wed, 9 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ