ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಪಶು ವೈದ್ಯಾಧಿಕಾರಿ

ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ.

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಪಶು ವೈದ್ಯಾಧಿಕಾರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 3:57 PM

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಾರೆ. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ.

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಎಸ್​ಐ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರಲ್ಲಿ 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಶಹರ ಪೊಲೀಸ್​​​ ಠಾಣೆ ಪಿಎಸ್ಐ ಸುನೀಲ್ ತೇಲಿ ಮತ್ತು ಅವರ ವಾಹನ ಚಾಲಕ ಸಚಿನ್ ಎಂಬವರನ್ನು​​​​​ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಫಿರೋಜ್ ಎಂಬುವರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ಪಿಎಸ್ಐ ಸುನೀಲ್ ತೇಲಿ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: Lokayukta Raid: ಹಾವೇರಿ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ, ಸಿಕ್ಕಿಬಿದ್ದ ಪಿಎಸ್​ಐ ಮತ್ತು ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ

ಈ ಬಗ್ಗೆ ಫಿರೋಜ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ನಡೆದ ಕಾರ್ಯಾಚರಣೆ ವೇಳೆ 40 ಸಾವಿರ ಲಂಚ ಪಡೆಯುವಾಗ ಲಂಚದ ಹಣ ಸಹಿತ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಲೋಕಾಯುಕ್ತ ಬಲೆಗೆ

ಮಂಡ್ಯ: ಮಂಡ್ಯದಲ್ಲೂ ಭ್ರಷ್ಟ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬೇಟೆಯಾಡಿದ್ದರು. ಗೋದಾಮಿಗೆ ಅನುಮತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲೆಯ ಮಳವಳ್ಳಿ ತಾಲೂಕಿನ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು. ಕಲ್ಕುಣಿ ಆನಂದ್ ಎಂಬವರು ಗೋದಾಮು ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಕೋರಿದ್ದರು. ಈ ವೇಳೆ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಅವರು 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗೋದಾಮು ನಿರ್ಮಾಣಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಕಚೇರಿಗೆ ಕಲ್ಕುಣಿ ಆನಂದ್ ಅವರು ದೂರು ನೀಡಿದ್ದರು. ಅದರಂತೆ ಕಲ್ಕುಣಿ ಆನಂದ್ ಎಂಬುವರ ಬಳಿಯಿಂದ ಬೇಡಿಕೆ ಇಟ್ಟ 50 ಸಾವಿರ ಲಂಚದ ಹಣದ ಪೈಕಿ ಮಾರ್ಚ್ 21 ಮುಂಗಡವಾಗಿ 20 ಸಾವಿರ ಹಣ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಾಕಮ್ಮ ಅವರನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ