AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಗಳು, ಬುಡಕಟ್ಟು ಜನರ ಕೋಟೆಯಾಗಿರುವ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಇನ್ನೂ ಮರೀಚಿಕೆ

chitradurga medical college: ಬೊಮ್ಮಾಯಿ ಸರ್ಕಾರವೂ ಚಿತ್ರದುರ್ಗ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣದ ಭರವಸೆ ನೀಡಿ ವರ್ಷವೇ ಕಳೆಯುತ್ತ ಬಂದಿದೆ. ಕಳೆದ 2 ತಿಂಗಳಲ್ಲಿ ಸಿಎಂ ಬೊಮ್ಮಾಯಿ ಐದಾರು ಸಲ ಬಂದಿದ್ದಾರೆ. ಆದ್ರೆ, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮಾತ್ರ ಚಾಲನೆ ನೀಡುವ ಕೆಲಸ ಆಗಿಲ್ಲ.

ಅಪಘಾತಗಳು, ಬುಡಕಟ್ಟು ಜನರ ಕೋಟೆಯಾಗಿರುವ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಇನ್ನೂ ಮರೀಚಿಕೆ
ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಇನ್ನೂ ಮರೀಚಿಕೆ
TV9 Web
| Updated By: ಸಾಧು ಶ್ರೀನಾಥ್​|

Updated on:Dec 20, 2022 | 5:09 PM

Share

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹಲವು ಹೆದ್ದಾರಿಗಳು ಹಾದು ಹೋಗಿದ್ದು ನಿತ್ಯ ಅಪಘಾತಗಳು ಸಂಭವಿಸುತ್ತವೆ. ಬುಡಕಟ್ಟು ಸಮುದಾಯದ ಜನರೇ ಹೆಚ್ಚಾಗಿರುವ ಬಯಲುಸೀಮೆಯ ಬಡಜನರಿಗೆ ಸರ್ಕಾರಿ ಆಸ್ಪತ್ರೆಗಳೇ ಜೀವಾಳ. ಹೀಗಾಗಿ, ಈ ಭಾಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ (Government medical college in chitradurga) ಆಗಬೇಕೆಂಬುದು ಈ ಭಾಗದ ಜನರ ಬಹುವರ್ಷಗಳ ಒತ್ತಾಯವಾಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಕೇವಲ ಘೋಷಣೆಗೆ ಸೀಮಿತವಾಗಿದೆ. ಕಳೆದ 2 ತಿಂಗಳಲ್ಲಿ ಸಿಎಂ ಬೊಮ್ಮಾಯಿ (Basavaraj Bommai) ಅನೇಕ ಸಲ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದ್ರೆ, ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಚಾಲನೆ ನಿಡುವ ಕಾರ್ಯ ಮಾತ್ರ ಆಗಿಲ್ಲ. ಹೀಗಾಗಿ, ಸರ್ಕಾರದ ವಿರುದ್ಧ ಹೋರಾಟಗಾರರು ಗರಂ ಆಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ಕೋಟೆನಾಡಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂಗೆ ನಿರಂತರ ಮನವಿ. ಆದರೆ ದಶಕಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟ ನಡೆದರೂ ನಿರ್ಲಕ್ಷ. ಮೆಡಿಕಲ್ ಕಾಲೇಜು ಘೋಷಣೆಗೆ ಸೀಮಿತ ಮಾಡಿರುವುದಕ್ಕೆ ಸ್ಥಳೀಯ ಹೋರಾಟಗಾರರ ಆಕ್ರೋಶ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹಲವು ಹೆದ್ದಾರಿಗಳು ಹಾದು ಹೋಗಿದ್ದು ನಿತ್ಯ ಅಪಘಾತಗಳು ಸಂಭವಿಸುತ್ತವೆ. ಬುಡಕಟ್ಟು ಸಮುದಾಯದ ಜನರೇ ಹೆಚ್ಚಾಗಿರುವ ಬಯಲುಸೀಮೆಯ ಬಡಜನರಿಗೆ ಸರ್ಕಾರಿ ಆಸ್ಪತ್ರೆಗಳೇ ಜೀವಾಳ.

ಹೀಗಾಗಿ, ಈ ಭಾಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಆಗಬೇಕೆಂಬುದು ಈ ಭಾಗದ ಜನರ ಬಹು ವರ್ಷಗಳ ಒತ್ತಾಯವಾಗಿದೆ. ಆದ್ರೆ, ರಾಜ್ಯ ಸರ್ಕಾರಗಳು ಮಾತ್ರ ಚಿತ್ರದುರ್ಗ ಜಿಲ್ಲೆಗೆ ಮೆಡಿಕಲ್ ಕಾಲೇಜು ಘೋಷಣೆಗೆ ಮಾತ್ರ ಸೀಮಿತಗೊಳಿಸಿವೆ. ಈಗಾಗಲೇ ಬೊಮ್ಮಾಯಿ ಸರ್ಕಾರವೂ ಮೆಡಿಕಲ್ ಕಾಲೇಜು ನಿರ್ಮಾಣದ ಭರವಸೆ ನೀಡಿ ವರ್ಷವೇ ಕಳೆಯುತ್ತ ಬಂದಿದೆ. ಆದ್ರೆ, ಈವರೆಗೆ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯ ಚುರುಕುಗೊಂಡಿಲ್ಲ.

ಕಳೆದ ಎರಡು ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಿಎಂ ಬೊಮ್ಮಾಯಿ ಐದಾರು ಸಲ ಬಂದಿದ್ದಾರೆ. ಆದ್ರೆ, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮಾತ್ರ ಚಾಲನೆ ನಿಡುವ ಕೆಲಸ ಆಗಿಲ್ಲ. ಹೀಗಾಗಿ, ಸರ್ಕಾರ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವವರೆಗೆ ನಿರಂತರ ಹೋರಾಟಕ್ಕೆ ಸಿದ್ದವಾಗಿದ್ದೇವೆ ಅಂತಾರೆ ಚಿತ್ರದುರ್ಗ ವಿಜಯ ಸೇನೆ ಮುಖ್ಯಸ್ಥ ಕೆ.ಟಿ.ಶಿವಕುಮಾರ್.

ಇದನ್ನೂ ಓದಿ:

ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್​ ಹೇಳ್ತಾ ಸದ್ಯಕ್ಕೆ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದ ಕೆಎಸ್​ ಈಶ್ವರಪ್ಪ

ಇನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ 23 ಎಕರೆ ಪ್ರದೇಶದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಗುರಿಯಿದೆ. ಆದ್ರೆ, 23ಎಕರೆ ಪೈಕಿ ಕೇವಲ 6 ಎಕರೆ ಮಾತ್ರ ಸದ್ಯ ಖಾಲಿಯಿದೆ. ಇನ್ನುಳಿದ ಪ್ರದೇಶದಲ್ಲಿ ಆಸ್ಪತ್ರೆಗೆ ಸಂಬಂಧಿಸಿದ ವಿವಿಧ ಕಟ್ಟಡಗಳಿವೆ. ಹೀಗಾಗಿ, ಕಟ್ಟಡಗಳನ್ನು ತೆರವುಗೊಳಿಸಿ ಮೆಡಿಕಲ್ ಕಾಲೇಜು ನಿರ್ಮಿಸುವ ಬದಲು ನಗರದ ಹೊರವಲಯದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವುದು ಒಳಿತು ಎಂಬ ವಾದವೂ ಇದೆ. ಹೀಗಾಗಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯ ನೆನಗುದಿಗೆ ಬಿದ್ದಿದೆ. ಹೀಗೆ ಮುಂದುವರೆದರೆ ಜಿಲ್ಲೆಯ ಶಾಸಕರ ಮನೆ ಎದುರು ಧರಣಿ ಕೂಡುತ್ತೇವೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಆಗಬೇಕೆಂಬುದು ಈ ಭಾಗದ ಜನರ ಒತ್ತಾಯವಾಗಿದೆ. ಅನೇಕ ಸಂದರ್ಭದಲ್ಲಿ ಜನರು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ, ಶಿವಮೊಗ್ಗ, ಬೆಂಗಳೂರಿಗೆ ತೆರಳುವ ದುಸ್ಥಿತಿಯಿದೆ. ಅನೇಕರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರಕದೆ ಉಸಿರುಚೆಲ್ಲಿದ ಪ್ರಕರಣಗಳಿವೆ. ಹೀಗಾಗಿ, ಇನ್ನಾದ್ರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಶೀಘ್ರ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಬೇಕೆಂಬುದು ದುರ್ಗದ ಜನರ ಆಗ್ರಹ.

ವರದಿ: ಬಸವರಾಜ ಮುದನೂರ್, ಟಿವಿ 9, ಚಿತ್ರದುರ್ಗ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:05 pm, Tue, 20 December 22

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?