ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೆ ಸಂಘಟನೆಯಲ್ಲಿ ಕೆಲಸ ಮಾಡಲ್ಲ -ಬಿಜೆಪಿ ಕಾರ್ಯಕರ್ತರಿಂದ ಕಿಡಿ
ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೆ ಸಂಘಟನೆಯಲ್ಲಿ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ಹೊರ ಹಾಕಿದ್ದು ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ಧ ಎಂದಿದ್ದಾರೆ.
ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು(Praveen Nettar) ಹತ್ಯೆ ಪ್ರಕರಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು(BJP Workers) ಕಿಡಿಕಾರಿದ್ದಾರೆ. ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೆ ಸಂಘಟನೆಯಲ್ಲಿ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹೊಸದುರ್ಗ ಮಂಡಲ ಉಪಾದ್ಯಕ್ಷ ಮಂಜು ಸಾಣೇಹಳ್ಳಿ, ಹೊಸದುರ್ಗ ಮಂಡಲ ಕಾರ್ಯದರ್ಶಿ ಎನ್.ಆರ್.ಜಗದೀಶ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ರಮೇಶ್ ಗೂಳಿಹಟ್ಟಿ ಸೇರಿದಂತೆ ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ಹೊರ ಹಾಕಿದ್ದು ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ಧ ಎಂದಿದ್ದಾರೆ.
ಕೊಲೆಯಾದ ಪ್ರವೀಣ್ ಫೇಸ್ಬುಕ್ ಪೋಸ್ಟ್ ವೈರಲ್
ಮೃತ ಪ್ರವೀಣ್ ಫೇಸ್ ಬುಕ್ ಪೋಸ್ಟ್ ಗಳು ಈಗ ವೈರಲ್ ಆಗಿವೆ. ಟೈಲರ್ ಕನ್ಹಯ್ಯ ಲಾಲ್ ಪ್ರಕರಣವನ್ನು ಖಂಡಿಸಿ ಪ್ರವೀಣ್ ಹಾಕಿದ್ದ ಕೆಲವು ಪೋಸ್ಟ್ಗಳು ವೈರಲ್ ಆಗುತ್ತಿವೆ. ಅಲ್ಲದೆ ಹಿಂದೆ ಹಿಂದೂಪರ ಹಾಕಿದ್ದ ಫೋಸ್ಟ್ಗಳು ಕೂಡ ವೈರಲ್ ಆಗುತ್ತಿವೆ.
ಹತ್ಯೆ ಖಂಡಿಸಿ ರಾಜೀನಾಮೆಗೆ ಮುಂದಾದ ಕಾರ್ಯಕರ್ತರು
ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆಗೆ ಮುಂದಾಗಿದ್ದಾರೆ. ಈಗಾಗಲೇ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶೇಖರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಶೇಖರ್ ಪಾಟೀಲ್ ಗ್ರಾಮೀಣ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿದ್ದರು.
ಬಾಗಲಕೋಟೆ ಯುವ ಮೋರ್ಚಾ ಕಾರ್ಯಕರ್ತರ ರಾಜೀನಾಮೆ
ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಯುವ ಮೋರ್ಚಾ ಸಭೆ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಸೂಕ್ತ ಕ್ರಮ ಕೈಗೊಳ್ಳುವವರೆಗೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆನಂದ ತಿಳಿಸಿದ್ದಾರೆ.
ಗಂಭೀರ ಚರ್ಚೆಯಲ್ಲಿ ತೊಡಗಿದ ಸಿಎಂ ಬೊಮ್ಮಾಯಿ, ಸಿ.ಟಿ ರವಿ, ಆರಗ ಜ್ಞಾನೇಂದ್ರ
ಗೃಹ ಕಚೇರಿ ಕೃಷ್ಣಾದಿಂದ ಆರ್.ಟಿ. ನಗರದ ಸಿಎಂ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ ಜೊತೆ ಸಿ.ಟಿ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಹೊರಟಿದ್ದು ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತರು ಹರಿಹಾಯುತ್ತಿದ್ದಾರೆ. ಕಠಿಣ ಕ್ರಮ ಯಾವಾಗ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸದ್ಯ ಇಘ ತುರ್ತು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
Published On - 3:03 pm, Wed, 27 July 22