ಹೃದಯವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಮಹಿಳೆಯೋರ್ವಳು ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೃದಯವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ.
ತಾಯಿ-ಮಗಳು
Edited By:

Updated on: Dec 08, 2023 | 2:05 PM

ಚಿತ್ರದುರ್ಗ, (ಡಿಸೆಂಬರ್ 08): ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಸಹ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ(Chitradruga) ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ನಡೆದಿದೆ. ತಾಯಿ ಲತಾ(25) ಮೊದಲು ನೀರಿನ ತೊಟ್ಟಿಯಲ್ಲಿ ಪುತ್ರಿ ಪ್ರಣೀತಾ, ಪುತ್ರ ಜ್ಞಾನೇಶ್ವರ್​ನನ್ನು ಮುಳುಗಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ಲತಾ ಮನೆಯಲ್ಲಿ ನೇಣುಗಿದುಕೊಮಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Loading...
Unable to load recommendations.
Follow Us