ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ

ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುಳಾ(21) ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಮಕ್ಕಳು
Edited By: ಆಯೇಷಾ ಬಾನು

Updated on: Aug 01, 2023 | 1:29 PM

ಚಿತ್ರದುರ್ಗ, ಆ.01: ಕಲುಷಿತ ನೀರು ಸೇವಿಸಿ(Contaminated Water) ಮಹಿಳೆ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುಳಾ(21) ಚಿಕಿತ್ಸೆ ಫಲಿಸದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಮಂಜುಳಾ ಕುಟುಂಬಸ್ಥರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಗರಸಭೆಯಿಂದ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರಸಭೆ ಅಧಿಕಾರಿಗಳ ವಿರುದ್ಧ ಕವಾಡಿಗರಹಟ್ಟಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮುಂದಿನ 7 ವರ್ಷದಲ್ಲಿ ಭಾರತದ ತಲಾದಾಯ ಶೇ. 70ರಷ್ಟು ಏರಿಕೆ ಸಾಧ್ಯತೆ; ಕರ್ನಾಟಕದ ಪಾತ್ರ ಎಷ್ಟು?

ಘಟನೆ ಸಂಬಂಧ ಕವಾಡಿಗರಹಟ್ಟಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಕವಾಡಿಗರಹಟ್ಟಿಯ ಮಂಜುಳಾ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡುದ್ದಾರೆ. ಅವರಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೀವ್ರ ಅಸ್ವಸ್ಥರಾಗಿದ್ದ ಐವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖುದ್ದಾಗಿ ಭೇಟಿ ನೀಡಿದ್ದೇನೆ, ಸದ್ಯ ಅಸ್ವಸ್ಥರೆಲ್ಲರ ಆರೋಗ್ಯ ಸ್ಥಿರವಾಗಿದೆ. ಮುಂಜಾಗೃತ ಕ್ರಮವಾಗಿ ಕವಾಡಿಗರಹಟ್ಟಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದೇವೆ. ಕುಡಿಯುವ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕವಾಡಿಗರಹಟ್ಟಿಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಮಂಜುಳಾ ಸಾವಿನ ಕಾರಣ ಏನೆಂಬುದು ಪರೀಕ್ಷೆ ಬಳಿಕ ತಿಳಿಯಲಿದೆ ಎಂದರು. ಹಾಗೂ ಇದೇ ವೇಳೆ ಕುಡಿಯುವ ನೀರು ಸರಬರಾಜು ಟ್ಯಾಂಕ್ ಗೆ ವಿಷಪ್ರಾಶನ ಶಂಕೆ ಇರುವ ವಿಚಾರಕ್ಕೆ ನೀರಿನ ಪರೀಕ್ಷಾ ವರದಿ ಬಳಿಕ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಚಿತ್ರದುರ್ಗದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:08 pm, Tue, 1 August 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us