ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ: ಪಿ.ಎಸ್.ವಸ್ತ್ರದ್ ನೇಮಕ ರದ್ದತಿಗೆ ಮನವಿ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರರಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ನೇಮಕ ರದ್ದತಿಗೆ ಮನವಿ ನೀಡಲಾಗಿದೆ.

ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ: ಪಿ.ಎಸ್.ವಸ್ತ್ರದ್ ನೇಮಕ ರದ್ದತಿಗೆ ಮನವಿ
ಚಿತ್ರದುರ್ಗದ ಮುರುಘಾಮಠ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 15, 2022 | 7:49 PM

ಚಿತ್ರದುರ್ಗ: ಕರ್ನಾಟಕ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ (Murugha Math) ಆಡಳಿತಾಧಿಕಾರಿಯನ್ನಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಡಿ. 13ರಂದು ನೇಮಿಸಿದೆ. ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದರು. ಆದರೆ ಈಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರರಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ನೇಮಕ ರದ್ದತಿಗೆ ಮನವಿ ನೀಡಲಾಗಿದೆ. ಈಗಾಗಲೇ ಡಾ. ಶಿವಮೂರ್ತಿ ಮುರುಘಾ ಶರಣರು ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ. ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ ಹೀಗಾಗಿ ಆಡಳಿತಾಧಿಕಾರಿ ನೇಮಕ ರದ್ದುಪಡಿಸಲು ಕೋರಿ ರಿಟ್ ಸಲ್ಲಿಕೆ ಮಾಡಲಾಗಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಹಿನ್ನೆಲೆ ಶಿವಮೂರ್ತಿ ಮುರುಘಾ ಶರಣರು ಕಳೆದ 3 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರಿಂದ ಹಲವು ದಿನಗಳಿಂದ ಮುರುಘಾಮಠದ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಆಗ್ರಹಗಳು ಬರುತ್ತಿದ್ದವು. ಅಂತಿಮವಾಗಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದರು.

ಇದನ್ನೂ ಓದಿ: ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶವನ್ನು ಸರ್ಕಾರ ಹಿಂಪಡೆಯಬೇಕು: ಬಸವಪ್ರಭು ಸ್ವಾಮೀಜಿ

ನಿವೃತ್ತ ಐಎಎಸ್​ ಅಧಿಕಾರಿ ಪಿ.ಎಸ್.ವಸ್ತ್ರದ್ ಅಧಿಕಾರ ಸ್ವೀಕಾರ

ನಿವೃತ್ತ ಐಎಎಸ್​ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಇಂದು (ಡಿ. 15) ರಂದು ಸರ್ಕಾರದ ಆದೇಶದಂತೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಧಿಕಾರ ಸ್ವೀಕರಿಸಿ ಮುರುಘಾಮಠದ ಕರ್ತೃಗದ್ದುಗೆ ದರ್ಶನ ಪಡೆದುಕೊಂಡರು. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಮುರುಘಾಶರಣರು ಜಿಪಿಎ ನೀಡಿರುವ ಬಗ್ಗೆ ಪರಿಶೀಲಿಸಬೇಕಿದೆ. ಎಸ್​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ, ಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭುಶ್ರೀಗೆ ಜಿಪಿಎ ನೀಡಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆಗಳಿಗೆ ಪರಿಹಾರ ಹುಡುಕಲಾಗುವುದು ಎಂದು ಪಿ.ಎಸ್.ವಸ್ತ್ರದ್​ ಹೇಳಿದರು.

ಇದನ್ನೂ ಓದಿ: ಆಡಳಿತಾಧಿಕಾರಿ ನೇಮಕವಾಗಿದೆ; ಇನ್ನೇನು ಹಸ್ತಕ್ಷೇಪ ಮಾಡಬೇಡಿ -ಮುರುಘಾ ಶರಣಗೆ ಜಡ್ಜ್​​ ಕೋಮಲಾ ಖಡಕ್ ಆದೇಶ

ಮುರುಘಾ ಮಠ ಅಧೀನ ಸಂಸ್ಥೆ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ

ಚಿತ್ರದುರ್ಗ ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್​.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.

ಮುರುಘಾಶ್ರೀ ವಜಾಕ್ಕೆ ಹೆಚ್ಚಿದ ಒತ್ತಡ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಯನ್ನು ಚಿತ್ರದುರ್ಗ ಮುರುಘಾಮಠದ ಪೀಠಾದ್ಯಕ್ಷ ಸ್ಥಾನದಿಂದ‌‌ ವಜಾ ಮಾಡಲು ಒತ್ತಡ ಹೆಚ್ಚಾಗಿದೆ. ಹೀಗಾಗಿ ಇಂದು ಚಿತ್ರದುರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಯಲಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ