ಪ್ರಾಣ ಉಳಿಸಲೆತ್ನಿಸದೆ ಯುವತಿ ಪ್ರಾಣ ಬಿಡುವ ವಿಡಿಯೋ ಮಾಡಿ ಅಮಾನವೀಯತೆ ತೋರಿದ ಜನರು
ಭರಮಸಾಗರ ಗ್ರಾಮದ ದೊಡ್ಡಕೆರೆಯಲ್ಲಿ ಯುವತಿಯೋರ್ವಳು ಮುಳಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರೂ, ಜನರು ಮಾನವೀಯತೆ ಮರೆತು ವಿಡಿಯೋ ರೆಕಾರ್ಡ್ ಮಾಡಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ (chitradurga) ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಭರಮಸಾಗರ ಗ್ರಾಮದ ದೊಡ್ಡಕೆರೆಯಲ್ಲಿ ಯುವತಿಯೋರ್ವಳು ಮುಳಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರೂ, ಜನರು ಮಾನವೀಯತೆ ಮರೆತು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಹೆಗ್ಗೆರೆ ಗ್ರಾಮದ ರಮ್ಯ(22) ಮೃತ ಯುವತಿ. ರಮ್ಯ ಜೀವನದಲ್ಲಿ ಜಿಗುಪ್ಸೆಯಿಂದ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.