AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ RSS ಇತರೆ ಸಂಘಟನೆಗಳಿಂದ ವಾಗ್ವಾದ: ಅರ್ಧಕ್ಕೆ ನಿಂತೇ ಹೋಯ್ತು ಶಾಂತಿ ಸಭೆ

ಚಿತ್ತಾಪುರ ಕ್ಷೇತ್ರದ RSS ಪಥಸಂಚಲನ ವಿವಾದದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ನಡೆಯಿತು. ಪ್ರತಿಯೊಂದು ಸಂಘಟನೆಯಿಂದ ಮೂವರಿಗೆ ಮಾತ್ರ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಆದರೆ ಜೈಭೀಮ್ ಸೇನೆ ಸಂಘಟನೆಯ ಮುಖಂಡ ಗುಂಡಪ್ಪ ಲಂಡನ್ಕರ್ ಅವರನ್ನು ಒಳಗಡೆ ಬಿಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆದಿದೆ.ಇದರ ಬೆನ್ನಲ್ಲೇ ಶಾಂತಿ ಸಭೆಯಲ್ಲಿ RSS ಹಾಗೂ ಇತರೆ ಸಂಘಟನೆಗಳಿಂದ ವಾಗ್ವಾದ ನಡೆದು ಸಭೆ ಅರ್ಧಕ್ಕೇ ಮೊಟಕುಗೊಂಡಿರುವುದು ಎಲ್ಲೆಡೆ ಸಂಚಲನ ಮೂಡಿಸಿದೆ.

ಚಿತ್ತಾಪುರದಲ್ಲಿ RSS ಇತರೆ ಸಂಘಟನೆಗಳಿಂದ ವಾಗ್ವಾದ: ಅರ್ಧಕ್ಕೆ ನಿಂತೇ ಹೋಯ್ತು ಶಾಂತಿ ಸಭೆ
ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದದ ಹಿನ್ನೆಲೆ ಶಾಂತಿಸಭೆ ಅರ್ಧಕ್ಕೆ ಮೊಟಕು!
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಭಾವನಾ ಹೆಗಡೆ|

Updated on: Oct 28, 2025 | 3:17 PM

Share

ಕಲಬುರಗಿ,ಅಕ್ಟೋಬರ್ 28: ಚಿತ್ತಾಪುರ ಕ್ಷೇತ್ರದಲ್ಲಿ ನಡೆದ ಆರ್​ಎಸ್​ಎಸ್​ (RSS) ಪಥಸಂಚಲನ ವಿವಾದದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು.  ಆದ್ರೆ, ಈ ವೇಳೆ ಸಂಘಟನೆಗಳಿಂದ ವಾಗ್ವಾದ ನಡೆದಿದೆ.  ಜೈಭೀಮ್ ಸೇನೆ ಸಂಘಟನೆಯ ಮುಖಂಡ ಗುಂಡಪ್ಪ ಲಂಡನ್ಕರ್ ಅವರನ್ನು ಒಳಗಡೆ ಬಿಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಯಿತು. ಇದರ ಬೆನ್ನಲ್ಲೇ ಮತ್ತೊಂದೆಡೆ ಶಾಂತಿ ಸಭೆಯಲ್ಲಿ RSS ಹಾಗೂ ಇತರೆ ಸಂಘಟನೆಗಳಿಂದ ವಾಗ್ವಾದ ನಡೆಯಿತು, ಈ ಹಿನ್ನೆಲೆಯಲ್ಲಿ  ಶಾಂತಿ-ಸಭೆ ಅರ್ಧಕ್ಕೆ ಮೊಟಕುಗೊಂಡಿದೆ.

“ಆರ್​ಎಸ್​ಎಸ್ ಲಾಠಿ ಬಿಟ್ಟು ಪಥಸಂಚಲನ ನಡೆಸಲಿ” ಎಂದು ಇತರ ಸಂಘಟನೆಗಳ ಆಗ್ರಹ

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್ಎಸ್ ಪಥಸಂಚಲನ ವಿವಾದದ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ RSS, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಯಲ್ಲಿ ಒಮ್ಮತ ಬರದೆ, ವಾಗ್ವಾದ ಉಂಟಾಗಿ ಸಭೆ ಅರ್ಧದಲ್ಲೇ ಮುಕ್ತಾಯಗೊಂಡಿದೆ.

ದಲಿತ ಪ್ಯಾಂಥರ್ಸ್ ಮತ್ತು ಜೈಭೀಮ್ ಸೇನೆ ಸಂಘಟನೆಯ ಕಾರ್ಯಕರ್ತರು “ಲಾಠಿ ಬಿಟ್ಟು ಪಥಸಂಚಲನ ನಡೆಸಲಿ” ಎಂದು ಆಗ್ರಹಿಸಿದ್ದರೆ, ಆರ್‌ಎಸ್ಎಸ್ ಅದಕ್ಕೆ ಒಪ್ಪದ ಹಿನ್ನೆಲೆ ವಾಗ್ವಾದ ತೀವ್ರಗೊಂಡಿದೆ. ಸಭೆಯಿಂದ ಹೊರಬಂದ ನಂತರ ಸಂಘಟನೆ ಕಾರ್ಯಕರ್ತರು ಆರ್‌ಎಸ್ಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಥಸಂಚಲನ ಕುರಿತ ಅಂತಿಮ ತೀರ್ಪು ಈಗ ಹೈಕೋರ್ಟ್ ಕೈಯಲ್ಲಿ

ಸಭೆಯಲ್ಲಿ ಯಾವುದೇ ಒಮ್ಮತದ ನಿರ್ಧಾರ ಕೈಗೊಳ್ಳದ ಕಾರಣ ಜಿಲ್ಲಾಡಳಿತ ಎಲ್ಲ ಸಂಘಟನೆಗಳ ಲಿಖಿತ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಲು ತೀರ್ಮಾನಿಸಿದೆ. ಹೀಗಾಗಿ ಆರ್‌ಎಸ್ಎಸ್ ಪಥಸಂಚಲನ ಕುರಿತ ಅಂತಿಮ ತೀರ್ಪು ಈಗ ಹೈಕೋರ್ಟ್ ಕೈಯಲ್ಲಿ ಇದೆ. ಅಕ್ಟೋಬರ್ 30ರಂದು ಕಲಬುರಗಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಜಿಲ್ಲೆಯ ಜನತೆ ಅದರತ್ತ ಕಣ್ಣು ಹಾಯಿಸಿದ್ದಾರೆ.

ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಜೈಭೀಮ್ ಸೇನೆ ಸಂಘಟನೆಯ ಮುಖಂಡ

ಪ್ರತಿ ಸಂಘಟನೆಯಿಂದ ಮೂವರಿಗೆ ಮಾತ್ರ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಆದರೆ ಜೈಭೀಮ್ ಸೇನೆ ಸಂಘಟನೆಯ ಮುಖಂಡ ಗುಂಡಪ್ಪ ಲಂಡನ್ಕರ್ ಅವರನ್ನು ಸಭೆಗೆ ಒಳಬಿಡದೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿತ್ತು. ಸಂಘಟನೆಯವರಿಗೆ ನೋಟಿಸ್ ನೀಡದ ಕಾರಣ ಅವರ ಹೆಸರು ಲಿಸ್ಟ್‌ನಲ್ಲಿ ಇರಲಿಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದರು. ಆದರೆ ಗುಂಡಪ್ಪ ಹಾಗೂ ಅವರ ಬೆಂಬಲಿಗರು ಇದನ್ನು ತೀವ್ರವಾಗಿ ವಿರೋಧಿಸಿ, ಡಿಸಿ ಕಚೇರಿ ಪ್ರವೇಶದ್ವಾರದಲ್ಲೇ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಮತ್ತೊಮ್ಮೆ ಶಾಂತಿ ಸಭೆಯಲ್ಲಿ ವಾಗ್ವಾದ ನಡೆದು ಸಭೆ ಅರ್ಧಕ್ಕೇ ನಿಂತಿರುವುದು ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ