ಬೆಂಗಳೂರಿನಲ್ಲಿ ಕಾಲರಾ ಭೀತಿ: ಎಚ್ಚೆತ್ತುಕೊಂಡ ಬಿಬಿಎಂಪಿ ಕೈಗೊಂಡ ಕ್ರಮಗಳೇನು? ಇಲ್ಲಿವೆ

ಕಾಲರಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಮಲ್ಲೇಶ್ವರದ ಮಹಿಳೆಯನ್ನ ಕೆ.ಸಿ.ಜನರಲ್ ವೈದ್ಯರು ಟೆಸ್ಟ್​ಗೆ ಒಳಪಡಿಸಿದ್ದಾಗ ನೆಗೆಟಿವ್ ರಿಪೋರ್ಟ್ ಬಂದಿದೆ. ನಗರದಲ್ಲಿ ಕಾಲರಾ ಭೀತಿ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಲರ್ಟ್ ಆಗಿದ್ದು, ಕಾಲರಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಹಾಗಾದ್ರೆ ಬಿಬಿಎಂಪಿಯ ಕ್ರಮಗಳೇನು?

ಬೆಂಗಳೂರಿನಲ್ಲಿ ಕಾಲರಾ ಭೀತಿ: ಎಚ್ಚೆತ್ತುಕೊಂಡ ಬಿಬಿಎಂಪಿ ಕೈಗೊಂಡ ಕ್ರಮಗಳೇನು? ಇಲ್ಲಿವೆ
ಬಿಬಿಎಂಪಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 04, 2024 | 10:47 PM

ಬೆಂಗಳೂರು, ಏಪ್ರಿಲ್​ 04: ನಗರದಲ್ಲಿ ಬರ ಆವರಿಸಿ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇನ್ನೊಂದೆಡೆ ಉರಿ ಉರಿ ಬಿಸಿಲು. ಇವೆಲ್ಲದರ ನಡುವೆ ಇದೀಗ ಸಿಲಿಕಾನ್ ಸಿಟಿ ಜನರಿಗೆ ಕಾಲರಾ (Cholera) ಭೀತಿ ಎದುರಾಗಿದೆ. ನಿನ್ನೆ ವಾಂತಿ, ಭೇದಿಯಿಂದ ಆಸ್ಪತ್ರೆ ಸೇರಿದ್ದ ಮಹಿಳೆಯ ರಿಪೋರ್ಟ್ ನೆಗೆಟಿವ್​ ಬಂದಿದೆ. ಕಾಲರಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಮಲ್ಲೇಶ್ವರದ ಮಹಿಳೆಯನ್ನ ಕೆ.ಸಿ.ಜನರಲ್ ವೈದ್ಯರು ಟೆಸ್ಟ್​ಗೆ ಒಳಪಡಿಸಿದ್ದರು. ಇತ್ತ ಕಾಲರಾ ಭೀತಿ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಲರ್ಟ್ ಆಗಿದ್ದು, ಕಾಲರಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.

ಬಿಬಿಎಂಪಿಯ ಕ್ರಮಗಳೇನು?

  • ರೋಗ ಹರುಡುವಿಕೆ ನಿಭಾಯಿಸಲು ವಿಧಾನಸಭಾ ಕ್ಷೇತ್ರವಾರು, ಕ್ಷೇತ್ರ ಮಟ್ಟದಲ್ಲಿ ಕ್ಷಿಪ್ರ ಪ್ರತಿಕ್ರಿಯೆ ತಂಡ ರಚನೆ
  • ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳ ಮಾಲೀಕರಿಗೆ, ಗ್ರಾಹಕರಿಗೆ ಕುಡಿಯಲು ಕಾಯಿಸಿದ ನೀರನ್ನ ವಿತರಿಸಲು ಸಲಹೆ ನೀಡಲಾಗಿದೆ.
  • ಪಾಲಿಕೆ ವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಖಾಸಗಿ ಲ್ಯಾಬ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಲರಾ ತಪಾಸಣೆಗೆ ಸೂಚನೆ.
  • ಶಂಕಿತ ಪ್ರಕರಣಗಳು ವರದಿಯಾದಲ್ಲಿ ಸರ್ಕಾರ ನಿಗದಿಪಡಿಸಿರುವ ಐ.ಹೆಚ್.ಐ.ಪಿ (IHIP) ತಂತ್ರಾಶದಲ್ಲಿ ಕಡ್ಡಾಯವಾಗಿ ವರದಿ ಮಾಡುವಂತೆ ಸೂಚನೆ.
  • ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಗಾಗಿ ನೀರಿನ ಮಾದರಿಗಳನ್ನ ಹಿರಿಯ ಆರೋಗ್ಯ ಪರಿವೀಕ್ಷಕರು ಸಂಗ್ರಹಿಸಿ PHI ಲ್ಯಾಬ್‌ಗೆ ಪ್ರತಿನಿತ್ಯ ಕಳುಹಿಸಲು ಸೂಚನೆ.
  • ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಓಆರ್​ಎಸ್​ ಕಾರ್ನರ್‌ಗಳನ್ನ ಸ್ಥಾಪಿಸುವ ಮೂಲಕ ಆಸ್ಪತ್ರೆಗೆ ಬರುವ ಹೊರರೋಗಿಗಳಲ್ಲಿ ಜಾಗೃತಿ ಮೂಡಿಸುವುದು.
  • ನೀರಿನಿಂದ ಹರಡುವ ರೋಗಗಳನ್ನ ತಡೆಗಟ್ಟುವ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದು.

ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಹೇಳಿದ್ದಿಷ್ಟು 

ಮಲ್ಲೇಶ್ವರಂ ಪ್ರದೇಶದಲ್ಲಿ ಕಾಲರಾ ಪ್ರಕರಣ ದೃಢಪಟ್ಟಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ‘ಬ್ಯುಸಿನೆಸ್ ಸ್ಟಾಂಡರ್ಡ್‌’ಗೆ ಮಾಹಿತಿ ನೀಡಿದ್ದಾರೆ. ಮಲ್ಲೇಶ್ವರಂನ ಪಿಜಿಯಲ್ಲಿ ಒಂದು ಪ್ರಕರಣದಲ್ಲಿ ಕಾಲರಾ ಪಾಸಿಟಿವ್ ಬಂದಿದ್ದು, ಇತರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾವು ಮಾಲಿನ್ಯದ ಮೂಲವನ್ನು ಮತ್ತು ಎಲ್ಲವನ್ನು ಗುರುತಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವರದಿ: ಶಾಂತಮೂರ್ತಿ ಎಂ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.