Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year: ಕ್ರಿಸ್​ಮಸ್, ಹೊಸ ವರ್ಷ ಪ್ರಯುಕ್ತ ರಾಜ್ಯದ ಈ ನಗರಗಳಿಗೆ ವಿಶೇಷ ರೈಲು

ಕ್ರಿಸ್​ಮಸ್ ಹಾಗೂ ಹೊಸ ವರ್ಷದ ಆಚರಣೆಗಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಈ ರೈಲುಗಳು ಬೆಂಗಳೂರು, ವಾಸ್ಕೋ ಡ ಗಾಮಾ ಮತ್ತು ಮಂಗಳೂರು ಸಂಪರ್ಕ ಕಲ್ಪಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲುಗಳ ಸಮಯಕೋಷ್ಟಕ ಮತ್ತು ನಿಲ್ದಾಣಗಳ ಮಾಹಿತಿಯನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದೆ.

New Year: ಕ್ರಿಸ್​ಮಸ್, ಹೊಸ ವರ್ಷ ಪ್ರಯುಕ್ತ ರಾಜ್ಯದ ಈ ನಗರಗಳಿಗೆ ವಿಶೇಷ ರೈಲು
ರೈಲು
Follow us
ವಿವೇಕ ಬಿರಾದಾರ
|

Updated on:Dec 21, 2024 | 8:06 AM

ಹುಬ್ಬಳ್ಳಿ, ಡಿಸೆಂಬರ್​ 21: ಕ್ರಿಸ್​ಮಸ್ (Christmas) ಹಬ್ಬದ ಮತ್ತು ಹೊಸ ವರ್ಷ​ದ (New Year) ಪ್ರಯುಕ್ತ ನೈಋತ್ಯ ರೈಲ್ವೆ ಕರ್ನಾಟಕದ ಪ್ರಮುಖ ನಗರಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ. ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳಿ-ಎಸ್‌ಎಂವಿಟಿ ಬೆಂಗಳೂರು, ಯಶವಂತಪುರ-ಮಂಗಳೂರು ಮತ್ತು ವಾಸ್ಕೋ ಡ ಗಾಮಾ-ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ.

ವಿಶೇಷ ರೈಲುಗಳ ವಿವರ ಈ ಕೆಳಗಿನಂತಿವೆ

  • SMVT ಬೆಂಗಳೂರು-ವಾಸ್ಕೋ-ಡ-ಗಾಮಾ ನಡುವೆ 2 ಟ್ರಿಪ್ ವಿಶೇಷ (07306/07307) ರೈಲು ಸಂಚಾರ

ರೈಲು ಸಂಖ್ಯೆ 07306 ಎಸ್‌ಎಂವಿಟಿ ಬೆಂಗಳೂರು-ವಾಸ್ಕೋ ಡ ಗಾಮಾ ವಿಶೇಷ ಎಕ್ಸ್ ಪ್ರೆಸ್ ರೈಲು 22 ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ಸಂಜೆ 6:15 ಕ್ಕೆ ಹೊರಟು, ಮರುದಿನ ವಾಸ್ಕೋ ಡ ಗಾಮಾ ನಿಲ್ದಾಣವನ್ನು ಬೆಳಿಗ್ಗೆ 8:45 ಕ್ಕೆ ತಲುಪಲಿದೆ.

ಮರಳಿ, ಇದೇ ರೈಲು (07307) ಡಿಸೆಂಬ‌ರ್ 21 ಮತ್ತು 23, 2024 ರಂದು ವಾಸ್ಕೋ ಡ ಗಾಮಾ ನಿಲ್ದಾಣದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು. ಅದೇ ದಿನ ರಾತ್ರಿ 11:55ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

  • SMVT ಬೆಂಗಳೂರು-ವಾಸ್ಕೋ-ಡ-ಗಾಮಾ ನಡುವೆ 1 ಟ್ರಿಪ್ ವಿಶೇಷ (07308/07309) ರೈಲು ಸಂಚಾರ

ರೈಲು ಸಂಖ್ಯೆ 07308 ಎಎಂವಿಟಿ ಬೆಂಗಳೂರು-ವಾಸ್ಕೋ ಡ ಗಾಮಾ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ವಾಸೋ ಡ ಗಾಮಾ ನಿಲ್ದಾಣವನ್ನು ತಲುಪಲಿದೆ.

ವಾಪಸು, ರೈಲು ಸಂಖ್ಯೆ 07309 ವಾಸೋ ಡ ಗಾಮಾ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 29 ರಂದು ವಾಸ್ಕೋ ಡ ಗಾಮಾದಿಂದ ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ಬೆಳಿಗ್ಗೆ 5:15ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರೈಲು ಕೆಲ ದಿನ 90 ನಿಮಿಷ ತಡವಾಗಿ ಸಂಚಾರ, 116 ರೈಲು ಗಾಡಿಗಳ ಸಂಖ್ಯೆ ಬದಲು

  • SMVT ಬೆಂಗಳೂರು-ವಾಸ್ಕೋ-ಡ-ಗಾಮಾ ನಡುವೆ 1 ಟ್ರಿಪ್ ವಿಶೇಷ (07310/07311) ರೈಲು ಸಂಚಾರ

ರೈಲು ಸಂಖ್ಯೆ 07310 ಎಸ್‌ಎಂವಿಟಿ ಬೆಂಗಳೂರು-ವಾಸೋ ಡ ಗಾಮಾ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 30 ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 8:30ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ವಾಸ್ಕೋ-ಡ-ಗಾಮಾ ನಿಲ್ದಾಣವನ್ನು ತಲುಪಲಿದೆ.

ಪುನಃ ಇದೇ ರೈಲು (07311) ಜನವರಿ 1 ರಂದು ವಾಸೋ-ಡ-ಗಾಮಾದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

07306/07307, 07308/07309 ಮತ್ತು 07310/07311 ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ ಹರಿಹರ, ರಾಣಿಬೆನೂರು, ಎಸ್‌ಎಂಎಂ ಹಾವೇರಿ, ಎಸ್‌ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸಾನ್ನೊರ್ಡೆಮ್ ಮತ್ತು ಮಡಗಾಂವ್ ಜಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲುಗಳು ಎರಡು ಎಸಿ ಟು ಟೈರ್ ಬೋಗಿಗಳು, 15 ಎಸಿ ತ್ರಿ ಟೈರ್ ಬೋಗಿಗಳು ಮತ್ತು 2 ಲಗೇಜ್ / ಜನರೇಟರ್,  ಬ್ರೇಕ್ ವ್ಯಾನ್​ಗಳನ್ನು ಹೊಂದಿವೆ.

  • ರೈಲು ಸಂಖ್ಯೆ 06505/06506 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್

ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್​​ಸೈಟ್​ಗೆ ಭೇಟಿ ನೀಡಿ. NTES ಅಪ್ಲಿಕೇಶನ್​​ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.

Published On - 8:01 am, Sat, 21 December 24

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್