AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್ ಹಬ್ಬ: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಕ್ರಿಸ್​ಮಸ್​ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ, ಸಮಯ, ನಿಲುಗಡೆಗಳ ಮಾಹಿತಿಯನ್ನು ರೈಲ್ವೆ ವೆಬ್‌ಸೈಟ್ ಅಥವಾ 139 ಸಹಾಯವಾಣಿ ಮೂಲಕ ಪಡೆಯಬಹುದು. ಈ ವಿಶೇಷ ರೈಲುಗಳು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಕ್ರಿಸ್​​ಮಸ್ ಹಬ್ಬ: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು
ಕಲಬುರಗಿ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Dec 23, 2024 | 8:33 AM

Share

ಬೆಂಗಳೂರು, ಡಿಸೆಂಬರ್​ 23: ಕ್ರಿಸ್​ಮಸ್ (Christmas) ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು (SWR) ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.

ರೈಲು ವಿವರ

  1. ರೈಲು ಸಂಖ್ಯೆ 06533 ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು, ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
  2. ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 25 ರಂದು ಬೆಳಿಗ್ಗೆ 9.34ಕ್ಕೆ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ವಿಶೇಷ ರೈಲಿನಲ್ಲಿ ಒಂದು ಎಸಿ ಟು ಟೈರ್ ಬೋಗಿ, ಎರಡು ಎಸಿ ತ್ರಿ ಟೈರ್ ಬೋಗಿಗಳು, ಒಂಬತ್ತು ಸ್ವೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್ಎಲ್‌ಆರ್ / ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರೈಲು ಕೆಲ ದಿನ 90 ನಿಮಿಷ ತಡವಾಗಿ ಸಂಚಾರ, 116 ರೈಲು ಗಾಡಿಗಳ ಸಂಖ್ಯೆ ಬದಲು

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಪ್ರಯಾಗರಾಜ್ ನಡುವೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಯಶವಂತಪುರ-ಮಂಗಳೂರು

  1. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
  2. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರ್​ಗೆ ಕರೆ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Mon, 23 December 24

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ