ಬೆಂಗಳೂರು, ಡಿಸೆಂಬರ್ 23: ಕ್ರಿಸ್ಮಸ್ (Christmas) ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು (SWR) ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.
ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ವಿಶೇಷ ರೈಲಿನಲ್ಲಿ ಒಂದು ಎಸಿ ಟು ಟೈರ್ ಬೋಗಿ, ಎರಡು ಎಸಿ ತ್ರಿ ಟೈರ್ ಬೋಗಿಗಳು, ಒಂಬತ್ತು ಸ್ವೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್ಎಲ್‌ಆರ್ / ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ರೈಲು ಕೆಲ ದಿನ 90 ನಿಮಿಷ ತಡವಾಗಿ ಸಂಚಾರ, 116 ರೈಲು ಗಾಡಿಗಳ ಸಂಖ್ಯೆ ಬದಲು
ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಪ್ರಯಾಗರಾಜ್ ನಡುವೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರ್ಗೆ ಕರೆ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:31 am, Mon, 23 December 24