KEA ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಕೇಸ್: ಇಬ್ಬರು ಪ್ರಾಂಶುಪಾಲರ ಬಂಧನ

| Updated By: Rakesh Nayak Manchi

Updated on: Nov 29, 2023 | 10:21 PM

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತಪ್ಪಿತಸ್ಥರನ್ನು ಬಂಧಿಸುವ ಕಾರ್ಯ ಮುಂದುವರಿಸಿದೆ. ಇದೀಗ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿ ತನಿಖೆ ಕೈಗೊಂಡಿದೆ.

KEA ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಕೇಸ್: ಇಬ್ಬರು ಪ್ರಾಂಶುಪಾಲರ ಬಂಧನ
KEA ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಎಸಗಿದ ಅಕ್ರಮ ಪ್ರಕರಣ ಸಂಬಂಧ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ ಸಿಐಡಿ
Follow us on

ಕಲಬುರಗಿ, ನ.29: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್​ಡಿಎ (FDA) ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಇಬ್ಬರು ಪ್ರಾಂಶುಪಾಲರನ್ನು ಬಂದಿಸಿದ್ದಾರೆ. ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಬುರಕಲ್ ಹಾಗೂ ಅಫಜಲಪುರ ಸರ್ಕಾರಿ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಬಸಣ್ಣ ಪೂಜಾರಿ ಬಂಧಿತರು.

ರಾಯಲ್ ಪಬ್ಲಿಕ್ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದ ಚಂದ್ರಕಾಂತ್, ಅಧಿಕೃತ ಅಭ್ಯರ್ಥಿಗಳ ಬದಲು ಬೇರೆಯವರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದರು. ಬಸಣ್ಣ ಪೂಜಾರಿ ಕೆಇಎ ಪರೀಕ್ಷೆ ಕಸ್ಟೋಡಿಯನ್ ಆಗಿದ್ದರು. ಪರೀಕ್ಷಾ ಅಕ್ರಮಕ್ಕೆ ಈ ಇಬ್ಬರು ಪ್ರಶ್ನೆ ಪತ್ರಿಕೆಯನ್ನೂ ಲಿಕ್ ಮಾಡಿದ್ದರು.

ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಮಾಹಿತಿಯನ್ನು ವಿಚಾರಿಸುತ್ತಿದ್ದಾರೆ. ಈ ವೇಳೆ ಚಂದ್ರಕಾಂತ್ ಹಾಗೂ ಬಸಣ್ಣ ಪೂಜಾರಿ ಅವರ ಹೆಸರು ಹೊರಬಿದ್ದಿದೆ.

ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ನ​ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್​

ಆರೋಪಿಗಳು ನೀಡಿದ್ದ ಸುಳಿವಿನ ಮೇರೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನ ತೀವ್ರ ವಿಚಾರಣೆ ನಡೆಸಿದ್ದರು. ಹಲವು ದಿನಗಳ ವಿಚಾರಣೆ ಬಳಿಕ ಚಂದ್ರಕಾಂತ್ ಹಾಗೂ ಬಸಣ್ಣ ಪೂಜಾರಿ ಅವರನ್ನು ಬಂಧಿಸಿ ಕಲಬುರಗಿ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ

ಅಕ್ಟೋಬರ್​​ 28 ರಂದು ರಾಜ್ಯಾದ್ಯಂತ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿರು. ಈ ಸಂಬಂಧ ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು, ಹಲವರನ್ನು ಬಂಧಿಸಿದ್ದರು.

ವಿಚಾರಣೆ ವೇಳೆ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಹೆಸರು ಹೊರಬಿದ್ದಿತ್ತು. ಈತನ ಬಂಧನಕ್ಕೆ ಹರಸಾಹಸಪಟ್ಟಿದ್ದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದು. ಸದ್ಯ ಆರ್​ಡಿ ಪಾಟೀಲ್ ಕೂಡ ಬಂಧನದಲ್ಲಿದ್ದು, ತೀವ್ರ ವಿಚಾರಣೆ ನಡೆಯುತ್ತಿದೆ. ಇದೀ ರೀತಿ, ಯಾದಗಿರಿಯಲ್ಲಿ ನಡೆದ ಪರೀಕ್ಷೆಯಲ್ಲೂ ಅಭ್ಯರ್ಥಿಗಳು ಬ್ಲೂಟೂತ್ ಬಳಕೆ ಮಾಡಿ ಸಿಕ್ಕಿಬಿದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ