Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್!

ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಐಡಿ ಡಿವೈಎಸ್ಪಿ ಕಿರುಕುಳದಿಂದಲೇ ವಕೀಲೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರ ಬಂಧನವಾಗಿದೆ. ಈ ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್!
Cid Dysp Kanaka Lakshmi
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on:Mar 11, 2025 | 3:23 PM

ಬೆಂಗಳೂರು, (ಮಾರ್ಚ್​ 11): ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್​ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್​ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ  ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದ್ರೆ, ವಿಚಾರಣೆ ಬಳಿಕ ವಕೀಲೆ ಜೀವಾ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಕನಕಲಕ್ಷ್ಮೀ ಬಂಧನ ಆಗಬೇಕು: ವಕೀಲರ ಸಂಘದ ಅಧ್ಯಕ್ಷ ವಿವೇಕ್ ಆಗ್ರಹ

ಇದನ್ನೂ ಓದಿ
Image
ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್​ಪಿ ಬಂಧನಕ್ಕೆ ಆಗ್ರಹ
Image
ಭೋವಿ ನಿಗಮ ಅವ್ಯವಹಾರ: ನಕಲಿ ಕಂಪನಿಗಳ ಖಾತೆಗೆ ಜಮೆ ಆಯ್ತು ಕೋಟಿ ಕೋಟಿ ಹಣ
Image
ಭೋವಿ ನಿಗಮದ ಹಗರಣ: ಸಿಐಡಿ ವಿಚಾರಣೆ ಬಳಿಕ ಆತ್ಮಹತ್ಯೆಗೆ ಶರಣಾದ ಯುವತಿ
Image
ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ಅಧಿಕಾರಿಗಳ ದಾಳಿ

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ 11 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿತ್ತು. ಬಳಿಕ ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮಿ ವಿರುದ್ಧ ಮೃತಳ ಸಹೋದರಿ ಸಹ ಗಂಭೀರ ಆರೋಪ ಮಾಡಿದ್ದರು.

ನವೆಂಬರ್ 22, 2024 ರಂದು, ಬನಶಂಕರಿ ಪೊಲೀಸರು ಕನಕ ಲಕ್ಷ್ಮಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 (ಎ) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 ರ ಅಡಿಯಲ್ಲಿ ಜೀವಾ ಅವರ ಸಹೋದರಿ ಸಂಗೀತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಪ್ರಕಾರ, ಕನಕ ಲಕ್ಷ್ಮಿ ಅವರು ನವೆಂಬರ್ 14 ಮತ್ತು 21, 2024 ರ ನಡುವೆ ಜೀವಾ ಅವರನ್ನು ವಿಚಾರಣೆಗೆ ಕರೆದರು, ಈ ಸಂದರ್ಭದಲ್ಲಿ ಅವರು ಉದ್ಯಮಿಗೆ ತೀವ್ರ ಕಿರುಕುಳ ನೀಡಿ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ನವೆಂಬರ್ 22 ರ ಬೆಳಿಗ್ಗೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ವಕೀಲೆಯೊಬ್ಬರ ಡೆತ್ ನೋಟ್ ಆರೋಪದ ನಂತರ ಡಿವೈಎಸ್ ಪಿ ಕನಕಲಕ್ಷ್ಮೀ ವಿರುದ್ಧ ವಿರುದ್ಧ ಬನಶಂಕರಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಡಿವೈಎಸ್ ಪಿ ಕನಕಲಕ್ಷ್ಮೀ ವಿರುದ್ಧ ಸಿಸಿಬಿಯಿಂದ ತನಿಖೆಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಆದೇಶಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Tue, 11 March 25

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ