PSI ನೇಮಕಾತಿ ಅಕ್ರಮ: ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಪಿಎಸ್ಐನನ್ನು ಹಿಡಿದು ತಂದ ಸಿಐಡಿ
ಇಬ್ಬರನ್ನು ಅಕ್ರಮವಾಗಿ ಪಿಎಸ್‌ಐ ಆಗಲು ಸಹಾಯ ಮಾಡಿ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಹಾಲಿ ಪಿಎಸ್ಐನನ್ನು ಸಿಐಡಿ ಬಂಧಿಸಿದೆ.
ಬೆಂಗಳೂರು: ಕರ್ನಾಟಕ ನಡೆದ 545 ಪಿಎಸ್‌ಐ ನೇಮಕಾತಿ ಅಕ್ರಮ ತನಿಖೆಯನ್ನು (PSI Recruitment Scam )ಸಿಐಡಿ ಅಧಿಕಾರಿಗಳು ಚುರುಕುಗೊಳಡಿಸಿದ್ದು, ಅಕ್ರಮದ ಬ್ರಹ್ಮಾಂಡ ಬಗೆದಷ್ಟು ಬಯಲಿಗೆ ಬರ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಠಾಣೆ ಪಿಎಸ್‌ಐ ಸುಬ್ರಮಣಿ ಎನ್ನುವರನ್ನು ಇಂದು(ಅ.06) ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ
PSI ನೇಮಕಾತಿ ಅಕ್ರಮದಲ್ಲಿ ಮಧ್ಯವರ್ತಿಯಾಗಿದ್ದ ಸುಬ್ರಮಣಿ, ಅಕ್ರಮವಾಗಿ ಇಬ್ಬರು ಆಯ್ಕೆಯಾಗಲು ಸಹಾಯ ಮಾಡಿದ್ದರು. ಅಕ್ರಮ ಬಯಲಿಗೆ ಬಂದ ಬಳಿಕ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.
ಬಂಧಿತ ಹಾಲಿ ಪಿಎಸ್‌ಐ ಸುಬ್ರಮಣಿನನ್ನು ಸಿಐಡಿ ಅಧಿಕಾರಿಗಳು 2ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ 10 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಈಗಾಗಲೇ ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಹ ಸಿಐಡಿ ಅಧಿಕಾರಿಗಳು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅಮೃತ್ ಪೌಲ್ ಮಾತ್ರವಲ್ಲದೇ ಹಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಪಿಎಸ್‌ಐ ಆಗಿದ್ದ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.