CIMS Recruitment 2026: ವೈದ್ಯಕೀಯ ವೃತ್ತಿಪರರಿಗೆ ಸಿಹಿ ಸುದ್ದಿ; ಚಾಮರಾಜನಗರ CIMS ನಲ್ಲಿ 49 ಹುದ್ದೆಗಳಿಗೆ ಅರ್ಜಿ ಆಹ್ವಾನ!

ವೈದ್ಯಕೀಯ ವೃತ್ತಿಯಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಅತ್ಯುತ್ತಮ ಉದ್ಯೋಗಾವಕಾಶ ಒಂದನ್ನು ನೀಡಿದೆ. ಖಾಲಿ ಇರುವ ಬೋಧಕ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅಂಚೆ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

CIMS Recruitment 2026: ವೈದ್ಯಕೀಯ ವೃತ್ತಿಪರರಿಗೆ ಸಿಹಿ ಸುದ್ದಿ; ಚಾಮರಾಜನಗರ CIMS ನಲ್ಲಿ 49 ಹುದ್ದೆಗಳಿಗೆ ಅರ್ಜಿ ಆಹ್ವಾನ!
ವೈದ್ಯಕೀಯ ವೃತ್ತಿಪರರಿಗೆ ಸಿಹಿ ಸುದ್ದಿ

Updated on: Aug 02, 2026 | 1:23 PM

ಕರ್ನಾಟಕ ಸರ್ಕಾರದಿಂದ ವೈದ್ಯರಿಗೆ ಇಲ್ಲಿದೆ ಸುವರ್ಣಾವಕಾಶ. ವೈದ್ಯಕೀಯ ವೃತ್ತಿಯಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಅತ್ಯುತ್ತಮ ಉದ್ಯೋಗಾವಕಾಶ ಒಂದನ್ನು ನೀಡಿದೆ. ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (CIMS) ಖಾಲಿ ಇರುವ ಬೋಧಕ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳ ಭರ್ತಿ:

ಚಾಮರಾಜನಗರ CIMS ಸಂಸ್ಥೆಯಲ್ಲಿ ಶೈಕ್ಷಣಿಕ ಮತ್ತು ವೈದ್ಯಕೀಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಕ್ಯಾಶುಯಲ್ಟಿ ಮೆಡಿಕಲ್ ಆಫೀಸರ್ (CMO) ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯಾಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಹುದ್ದೆಗೆ ತಕ್ಕಂತೆ ಶೈಕ್ಷಣಿಕ ಅರ್ಹತೆಯ ವಿವರ:

ಬೋಧಕ ಸಿಬ್ಬಂದಿ ಹುದ್ದೆಗಳಾದ ಪ್ರೊಫೆಸರ್, ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವೈದ್ಯಕೀಯ ವಿಭಾಗದಲ್ಲಿ MD, MS, DNB, DrNB, MDS, M.Sc. ಅಥವಾ Ph.D. ಪದವಿ ಪೂರ್ಣಗೊಳಿಸಿರಬೇಕು. ಇನ್ನು ತುರ್ತು ಚಿಕಿತ್ಸಾ ವಿಭಾಗದ ಕ್ಯಾಶುಯಲ್ಟಿ ಮೆಡಿಕಲ್ ಆಫೀಸರ್ (CMO) ಹುದ್ದೆಗೆ ಅರ್ಜಿ ಸಲ್ಲಿಸಲು MBBS ಪದವಿ ಪಡೆದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಅರ್ಜಿ ಶುಲ್ಕ ಮತ್ತು ಅಭ್ಯರ್ಥಿಗಳ ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ. 4,000/- ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ ಪಾವತಿಸಬೇಕಾಗುತ್ತದೆ. ಇನ್ನು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅವರ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಪಟ್ಟಿ ಹಾಗೂ ನೇರ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಪಾರದರ್ಶಕವಾಗಿ ನಡೆಯಲಿದೆ.

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನ:

ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ (ಅಂಚೆ) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ cimscrnagara.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಅರ್ಜಿಯಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ಶೈಕ್ಷಣಿಕ ದಾಖಲೆಗಳು ಹಾಗೂ ತೆಗೆಸಿದ ಡಿಡಿ (DD) ಯನ್ನು ಲಗತ್ತಿಸಿ ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿಕೊಡಬೇಕಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:16 pm, Sun, 2 August 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us