ಕೋವಿಡ್​ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಸ್ಮಶಾನ, ಚಿತಾಗಾರದಲ್ಲಿ ನಿರಾಕರಿಸದಂತೆ ಸುತ್ತೋಲೆ

ಈ ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಕೋವಿಡ್​ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಸ್ಮಶಾನ, ಚಿತಾಗಾರದಲ್ಲಿ ನಿರಾಕರಿಸದಂತೆ ಸುತ್ತೋಲೆ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 11, 2024 | 3:00 PM

ಬೆಂಗಳೂರು, ಜನವರಿ 11: ಕರ್ನಾಟಕದಲ್ಲಿ ಅತೀ ಹೆಚ್ಚು ಕೊವಿಡ್ (Covid)​ ಕೇಸ್​ಗಳು ಕಂಡುಬರುತ್ತಿವೆ. ರಾಜ್ಯದಲ್ಲಿ ಇದುವರೆಗೆ ಕೊವಿಡ್​ಗೆ 26 ಜನರು ಮೃತಪಟ್ಟಿದ್ದಾರೆ. ಈ ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ, ಸ್ಮಶಾನದ ಸಿಬ್ಬಂದಿಯು ನಿರಾಕರಿಸುವಂತ್ತಿಲ್ಲ.

ಇದನ್ನೂ ಓದಿ: ಕೋವಿಡ್ ಪರಿಣಾಮ: ಬೆಂಗಳೂರಿನ ಶೇ 30ರಷ್ಟು ಮಂದಿಯಲ್ಲಿ ಹೆಚ್ಚಾದ ಗೊರಕೆ ಸಮಸ್ಯೆ

ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಂದರೆ, N95 ಮಾಸ್ಕ್, ಗ್ಲೋವ್ಸ್​ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ಅಂತ್ಯಕ್ರಿಯೆಯನ್ನು ನಡೆಸಲು ತಿಳಿಸುವಂತೆ ಸೂಚಿಸಲಾಗಿದೆ.

ಈ ನಿಟ್ಟಿನಲ್ಲಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Karnataka Covid Case Today: ಕರ್ನಾಟಕದಲ್ಲಿ ಇಂದು 279 ಮಂದಿಗೆ ಕೊರೊನಾ ದೃಢ, ಮೂವರು ಬಲಿ

ರಾಜ್ಯದಲ್ಲಿ ಇದುವರೆಗೂ 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಿನ್ನೆ ಒಬ್ಬರು ಮೃತಪಟ್ಟಿದ್ದರು. ಆ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.74 ರಷ್ಟಿದೆ. ಕಳೆದ 24 ಗಂಟೆಯಲ್ಲಿ 7,315 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 974 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

257 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಕೊವಿಡ್​ ಬಗ್ಗೆ ರಾಜ್ಯದ ಜನ ಆತಂಕಕ್ಕೊಳಗಾಗಬಾರದು: ಸಚಿವ ದಿನೇಶ್ ಗುಂಡೂರಾವ್

ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಿನ್ನೆ ನಡೆದ ಕೊವಿಡ್​ ಸೋಂಕು ನಿಯಂತ್ರಣ ಪರಾಮರ್ಶೆ ಸಭೆ ಬಳಿಕ ಅವರು ಮಾತನಾಡಿ, ಕರ್ನಾಟಕದಲ್ಲಿ ಕೊವಿಡ್​ ಸೋಂಕು ಕಂಟ್ರೋಲ್​ನಲ್ಲಿದೆ. ಕೊವಿಡ್​ ಬಗ್ಗೆ ರಾಜ್ಯದ ಜನ ಆತಂಕಕ್ಕೊಳಗಾಗಬಾರದು. ಸರ್ಕಾರ ಕೊವಿಡ್​ ಗಂಭೀರವಾಗಿ ತೆಗೆದುಕೊಂಡಿದೆ. ತೀವ್ರ ಸೋಂಕಿನ ಲಕ್ಷಣ ಇರುವವರಿಗೆ ಕೊವಿಡ್ ಟೆಸ್ಟ್ ಮಾಡಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ