AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ರೂ ಪತ್ತೆ; CISF ತಪಾಸಣೆ ವೇಳೆ ಬಾತ್ ರೂಂನಲ್ಲಿ 10 ಲಕ್ಷ ಬಿಸಾಡಿದ್ದ ಅಧಿಕಾರಿ ಪತ್ನಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿ ಮತ್ತು ಅವರ ಪತ್ನಿ ಬಳಿ 74 ಲಕ್ಷ ರೂ. ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಿಂದ (CISF) ಅಧಿಕಾರಿ ಬಳಿಯಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ರೂ ಪತ್ತೆ; CISF ತಪಾಸಣೆ ವೇಳೆ ಬಾತ್ ರೂಂನಲ್ಲಿ 10 ಲಕ್ಷ ಬಿಸಾಡಿದ್ದ ಅಧಿಕಾರಿ ಪತ್ನಿ!
ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ನಗದು ಪತ್ತೆ
KUSHAL V
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:59 PM

Share

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿ ಮತ್ತು ಅವರ ಪತ್ನಿ ಬಳಿ 74 ಲಕ್ಷ ರೂ. ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಿಂದ (CISF) ಅಧಿಕಾರಿ ಬಳಿಯಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಕೇಂದ್ರ ಸರ್ಕಾರದ ಕಸ್ಟಮ್ಸ್ ವಿಭಾಗದ ಅಧಿಕಾರಿ ಇರ್ಫಾನ್ ಅಹ್ಮದ್ ಹಾಗೂ ಅವರ ಪತ್ನಿ ಬಳಿ CISF ತಂಡ ಪರಿಶೀಲನೆ ನಡೆಸಿದ ವೇಳೆ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಅಚ್ಚರಿಯ ಸಂಗತಿಯೆಂದರೆ, ದಂಪತಿಯ ಬಳಿಯಿದ್ದ ನಗದನ್ನು CISF ತಂಡ ಪರಿಶೀಲನೆ ನಡೆಸುತ್ತಿದ್ದ ವೇಳೆ ಅಧಿಕಾರಿ ಪತ್ನಿ ತಪ್ಪಿಸಿಕೊಳ್ಳಲು ಬಾತ್​ರೂಂನಲ್ಲಿ 10 ಲಕ್ಷ ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ!

ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್ ಜಪ್ತಿ ಸದ್ಯ, ಪರಿಶೀಲನೆ ವೇಳೆ ದಂಪತಿ ಹತ್ತಿರ 2 ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್, ಒಂದು ಸೂಟ್​ಕೇಸ್ ಹಾಗೂ ಬ್ಯಾಗ್​ನಲ್ಲಿದ್ದ ಒಟ್ಟು 74 ಲಕ್ಷದ 81 ಸಾವಿರದ 500 ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಇದೀಗ, IT ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.

ಅಂದ ಹಾಗೆ, ಚೆನ್ನೈನಲ್ಲಿರುವ ಕಸ್ಟಮ್ಸ್ ಅಧಿಕಾರಿ ಲಕ್ನೋಗೆ ಬೆಂಗಳೂರು ಮೂಲಕ ತೆರಳುತ್ತಿದ್ದರು. ಈ ನಡುವೆ, ಅಧಿಕಾರಿ ಇರ್ಫಾನ್ ಅಹ್ಮದ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು