ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ: ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಕುಮಾರ್

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ಪ್ರಸನ್ನ ಬಿ.ವರಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಇದೀಗ ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್.ದಿನೇಶ್ ಕುಮಾರ್​ ಅವರನ್ನು ನೇಮಕ ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ: ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಕುಮಾರ್
ಪ್ರಸನ್ನ ಬಿ.ವರಾಳೆ, ಪಿ.ಎಸ್.ದಿನೇಶ್ ಕುಮಾರ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Jan 24, 2024 | 9:17 PM

ಬೆಂಗಳೂರು, ಜನವರಿ 24: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ಪ್ರಸನ್ನ ಬಿ.ವರಾಳೆ (Prasanna B Varale) ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಪ್ರಸನ್ನ ಬಿ.ವರಾಳೆ ಅವರು ಹಾಲಿ ಕರ್ನಾಟಕ ಹೈಕೋರ್ಟ್ ಸಿಜೆ ಆಗಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್.ದಿನೇಶ್ ಕುಮಾರ್​ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಹೆಸರು ಶಿಫಾರಸು ಮಾಡಲಾಗಿತ್ತು.

ಪ್ರಸನ್ನ ಬಿ.ವರಾಳೆ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಭಾರತದ 34ನೇ ಮುಖ್ಯ ನ್ಯಾಯ ಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ತಿಂಗಳು ನ್ಯಾಯಮೂರ್ತಿ ಎಸ್​ಕೆ ಕೌಲ್​ ಅವರು ನಿವೃತ್ತರಾದ ನಂತರ ಸುಪ್ರೀಂ ಕೋರ್ಟ್​ನಲ್ಲಿ ಹುದ್ದೆ ಖಾಲಿಯಾಗಿತ್ತು. ಇದೀಗ ಎಸ್​ಸಿ ಕೊಲಿಜಿಯಂ ಅವರ ಹೆಸರು ಶಿಫಾರಸು ಮಾಡಿದ ಒಂದು ವಾರದೊಳಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ.ವರಾಳೆ ಅವರ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು

ನ್ಯಾಯಮೂರ್ತಿ ವರಾಳೆ ಅವರು 1962, ಜೂನ್ 23 ರಂದು ಕರ್ನಾಟಕದ ನಿಪಾಣಿಯಲ್ಲಿ ಜನಿಸಿದ್ದು ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದುಕೊಂಡಿದ್ದರು. ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದರು.

61 ವರ್ಷದ ಪ್ರಸನ್ನ ಬಿ.ವರಾಳೆ ಅವರು ಎರಡು ದಶಕಗಳಿಂದ ಕಾನೂನು (ನಿರ್ದಿಷ್ಟವಾಗಿ ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತಾತ್ಮಕ ವಿಷಯಗಳು) ಅಭ್ಯಾಸ ಮಾಡಿದ್ದಾರೆ ಮತ್ತು ಈ ಹಿಂದೆ ಬಾಂಬೆ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಅಕ್ಟೋಬರ್ 2022 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ಓದಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶರ್ಮ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಕಾನೂನು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಕರ್ನಾಟಕ ಹೈಕೋರ್ಟ್​ನ ಹಾಲಿ 2ನೇ ಹಿರಿಯ ನ್ಯಾಯಮೂರ್ತಿ ಆಗಿರುವ ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Wed, 24 January 24

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್