ಬೆಂಗಳೂರು, ಜನವರಿ 24: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ಪ್ರಸನ್ನ ಬಿ.ವರಾಳೆ (Prasanna B Varale) ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಪ್ರಸನ್ನ ಬಿ.ವರಾಳೆ ಅವರು ಹಾಲಿ ಕರ್ನಾಟಕ ಹೈಕೋರ್ಟ್ ಸಿಜೆ ಆಗಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಹೆಸರು ಶಿಫಾರಸು ಮಾಡಲಾಗಿತ್ತು.
ಪ್ರಸನ್ನ ಬಿ.ವರಾಳೆ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಭಾರತದ 34ನೇ ಮುಖ್ಯ ನ್ಯಾಯ ಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ತಿಂಗಳು ನ್ಯಾಯಮೂರ್ತಿ ಎಸ್ಕೆ ಕೌಲ್ ಅವರು ನಿವೃತ್ತರಾದ ನಂತರ ಸುಪ್ರೀಂ ಕೋರ್ಟ್ನಲ್ಲಿ ಹುದ್ದೆ ಖಾಲಿಯಾಗಿತ್ತು. ಇದೀಗ ಎಸ್ಸಿ ಕೊಲಿಜಿಯಂ ಅವರ ಹೆಸರು ಶಿಫಾರಸು ಮಾಡಿದ ಒಂದು ವಾರದೊಳಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ.ವರಾಳೆ ಅವರ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು
ನ್ಯಾಯಮೂರ್ತಿ ವರಾಳೆ ಅವರು 1962, ಜೂನ್ 23 ರಂದು ಕರ್ನಾಟಕದ ನಿಪಾಣಿಯಲ್ಲಿ ಜನಿಸಿದ್ದು ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದುಕೊಂಡಿದ್ದರು. ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದರು.
61 ವರ್ಷದ ಪ್ರಸನ್ನ ಬಿ.ವರಾಳೆ ಅವರು ಎರಡು ದಶಕಗಳಿಂದ ಕಾನೂನು (ನಿರ್ದಿಷ್ಟವಾಗಿ ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತಾತ್ಮಕ ವಿಷಯಗಳು) ಅಭ್ಯಾಸ ಮಾಡಿದ್ದಾರೆ ಮತ್ತು ಈ ಹಿಂದೆ ಬಾಂಬೆ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದಾರೆ. ಅಕ್ಟೋಬರ್ 2022 ರಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಇದನ್ನೂ ಓದಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ
ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಶರ್ಮ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಕಾನೂನು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಕರ್ನಾಟಕ ಹೈಕೋರ್ಟ್ನ ಹಾಲಿ 2ನೇ ಹಿರಿಯ ನ್ಯಾಯಮೂರ್ತಿ ಆಗಿರುವ ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:58 pm, Wed, 24 January 24