ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’ ಎಂದ ಸಿಜೆಐ
Hijab Row | Supreme Court: ಹಿಜಾಬ್ ಪ್ರಕರಣದ ಅರ್ಜಿ ತುರ್ತು ವಿಚಾರಣೆಗೆ ಸಿಜೆಐ ರಮಣ ನಿರಾಕರಿಸಿದ್ದಾರೆ. ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ.
ಹಿಜಾಬ್ ಪ್ರಕರಣ (Hijab Row) ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ (Supreme Court) ವಿದ್ಯಾರ್ಥಿನಿ ಐಶಾತ್ ಶಿಫಾ ಮನವಿ ಮಾಡಿದ್ದರು. ಅರ್ಜಿ ತುರ್ತು ವಿಚಾರಣೆಗೆ ಸಿಜೆಐ ರಮಣ ನಿರಾಕರಿಸಿದ್ದಾರೆ. ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ. ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ತ ಕಾಮತ್ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಅರ್ಜಿಯಲ್ಲಿ ಮಾ.28ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ವಕೀಲರು ಕೋರಿಕೊಂಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಸಿಜೆಐ N.V.ರಮಣ, ವಿಷಯವನ್ನು ಅತಿರಂಜಿತಗೊಳಿಸಬೇಡಿ ಎಂದು ನುಡಿದಿದ್ದಾರೆ. ಈ ಹಿಂದೆ ಕೂಡ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾಗ ಸುಪ್ರೀಂ ಅದನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆ ಮುಂದೂಡಿತ್ತು.
ಈ ಕುರಿತು ಎಎನ್ಐ ಟ್ವೀಟ್ ಇಲ್ಲಿದೆ:
Advocate Kamat mentions in SC the plea challenging Karnataka High Court’s order that dismissed petitions against the ban on #Hijab in educational institutions.
Kamat says exams about to begin. SC tells him, “Don’t sensitise the matter, nothing to do with exams.”
— ANI (@ANI) March 24, 2022
ಕರ್ನಾಟಕ ಹೈಕೋರ್ಟ್, ತನ್ನ ಇತ್ತೀಚಿನ ತೀರ್ಪಿನಲ್ಲಿ ಹಿಜಾಬ್ ಸೇರಿದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳ ಮೇಲಿನ ನಿಷೇಧವನ್ನು ಎತ್ತಿಹಿಡಿದಿತ್ತು. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.
ಈ ನಡುವೆ, ಹಿಜಾಬ್ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿ ಖಾಝಿ ಎಂ ಜೈಬುನ್ನಿಸಾ ಅವರಿಗೆ ಜೀವ ಬೆದರಿಕೆ ಇದೆ ಎಂಬ ದೂರಿನ ಹಿನ್ನೆಲೆಯಲ್ಲಿ ‘ವೈ ಕೆಟಗರಿ’ ಭದ್ರತೆಯನ್ನು ಒದಗಿಸಲಾಗಿದೆ.
ಹಿಜಾಬ್ಗೆ ಅನುಮತಿ ನೀಡದ ಕಾರಣ ಕರ್ನಾಟಕದಲ್ಲಿ ಹಲವು ವಿದ್ಯಾರ್ಥಿನಿಯರು ಪರೀಕ್ಷೆಗಳಿಗೆ ಹಾಜರಾಗುತ್ತಿಲ್ಲ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತು ಮಾಹಿತಿ ನೀಡಿ, ಕೋರ್ಟ್ ಆದೇಶದ ನಂತರ ಗೈರಾದ ವಿದ್ಯಾರ್ಥಿನಿಯರಿಗೆ ಮರುಪರೀಕ್ಷೆ ಇಲ್ಲ ಎಂದು ಹೇಳಿದ್ದಾರೆ. ಜತೆಗೆ ನ್ಯಾಯಾಲಯ ಏನೇ ಆದೇಶ ನೀಡಿದರೂ ಪಾಲಿಸುವುದಾಗಿ ಅವರು ಹೇಳಿದ್ದಾರೆ.
ಇದನ್ನೂ ಓದಿ:
ಹಿಜಾಬ್ ವಿವಾದ: ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚುರುಕು, ವಕ್ಘ್ ಬೋರ್ಡ್ ಅಧ್ಯಕ್ಷರಿಂದ ವಕೀಲರ ಭೇಟಿ
Published On - 11:23 am, Thu, 24 March 22