AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

Mysore News: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ
ಮೃತ ಯುವಾ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ನಾಯಕ್
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on: Jul 10, 2023 | 7:06 AM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ (Yuva Brigade) ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ (T Narasipur) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್​ (32) ಮೃತ ಯುವಾ ಬ್ರಿಗೇಡ್ ಕಾರ್ಯಕರ್ತ. ಮೃತ ಕಾರ್ಯಕರ್ತ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು.09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ಆಗಿತ್ತು. ವಾಗ್ವಾದ ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಟಿ.ನರಸೀಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಠಾಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಡಬಲ್ ಮರ್ಡರ್:​ ಮನೆಯಲ್ಲೇ ದಂಪತಿಯ ಭೀಕರ ಹತ್ಯೆ

ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಅಲ್ಲದೇ ಆಸ್ಪತ್ರೆಗೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಮೃತ ಯುವಕನ ಅಂತಿಮ ದರ್ಶನ ಪಡೆದರು. ಬಳಿಕ ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

 ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ