AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ

ಗ್ರಾಮ‌ ಪಂಚಾಯಿತಿ ಚುನಾವಣಾ ಫಲಿತಾಂಶ ಬಳಿಕ ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗೆದ್ದ ಅಭ್ಯರ್ಥಿ ಹಾಗೂ ಬೆಂಬಲಿಗರ ವಿರುದ್ಧ ಗಲಾಟೆ ಶುರುವಾಗಿ ಮಾರಾಮಾರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Dec 31, 2020 | 9:47 AM

Share

ವಿಜಯಪುರ: ಗ್ರಾಮ‌ ಪಂಚಾಯಿತಿ ಚುನಾವಣಾ ಫಲಿತಾಂಶ ಬಳಿಕ ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗೆದ್ದ ಅಭ್ಯರ್ಥಿ ಹಾಗೂ ಬೆಂಬಲಿಗರ ವಿರುದ್ಧ ಗಲಾಟೆ ಶುರುವಾಗಿ ಮಾರಾಮಾರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಡುಮಕನಾಳ ಗ್ರಾಮದಲ್ಲಿ ಸೋತ ಅಭ್ಯರ್ಥಿ ಶಿವಪ್ಪ ಕನಾಳ ಮನೆ ಮುಂದೆ ಗೆದ್ದ ಅಭ್ಯರ್ಥಿಗಳಾದ ಚಂದ್ರಕಾಂತ ನಂದಗೊಂಡ, ಅಪ್ಪುಗೌಡ, ಲಕ್ಷ್ಮಣ ಘೋರ್ಪಡೆ ಬೆಂಬಲಿಗರು ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದರು. ಈ ವೇಳೆ ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಸೋತ ಅಭ್ಯರ್ಥಿ ಶಿವಪ್ಪ ಹಾಗೂ ಆತನ ಕುಟುಂಬಸ್ಥರಾದ ರಾಯಪ್ಪ ಶ್ರೀಶೈಲ್, ಪುತಳಾಬಾಯಿ, ಭೀಮಕ್ಕ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಾಯಾಳುಗಳನ್ನ ಚಡಚಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಿವಪ್ಪ ಕನಾಳ, ನಂದರಗಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್​ಗೆ ಸ್ಪರ್ಧಿಸಿದ್ದರು. ಶಿವಪ್ಪನ ವಿರುದ್ಧ ಗೆದ್ದ ಚಂದ್ರಕಾಂತ ನಂದಗೊಂಡ ಹಾಗೂ ಆತನ ಬೆಂಬಲಿಗರು ಶಿವಪ್ಪನ ಮನೆಮುಂದೆ ಪಟಾಕಿ ಹಚ್ಚಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿ ರಸ್ತೆಯಲ್ಲಿ ಮಾರಾಮಾರಿಯಾಗಿದೆ.

ಮಹಿಳೆ ಮೇಲೆ ದೌರ್ಜನ್ಯ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ದ FIR

Published On - 9:33 am, Thu, 31 December 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ