ಹವಾಮಾನ ಬದಲಾವಣೆ: ಬೆಂಗಳೂರು, ಪುಣೆಗೆ ಸಾಮೂಹಿಕ ವಲಸೆ ಹೆಚ್ಚಳ ಸಾಧ್ಯತೆ: ನಾರಾಯಣಮೂರ್ತಿ

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹವಾಮಾನ ಬದಲಾವಣೆಯ ಬಗ್ಗೆ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಿಗೆ ಸಾಮೂಹಿಕ ವಲಸೆಯನ್ನು ಪ್ರಚೋದಿಸಬಹುದು ಎಂದು ಎಚ್ಚರಿಸಿದ್ದಾರೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದಂತಹ ದೇಶಗಳು, ಹಲವಾರು ಆಫ್ರಿಕನ್ ರಾಷ್ಟ್ರಗಳು ವಿಶೇಷವಾಗಿ ಏರುತ್ತಿರುವ ತಾಪಮಾನದ ಪರಿಣಾಮಗಳಿಗೆ ಗುರಿಯಾಗುತ್ತವೆ ಎಂದು ತಿಳಿಸಿದರು.

ಹವಾಮಾನ ಬದಲಾವಣೆ: ಬೆಂಗಳೂರು, ಪುಣೆಗೆ ಸಾಮೂಹಿಕ ವಲಸೆ ಹೆಚ್ಚಳ ಸಾಧ್ಯತೆ: ನಾರಾಯಣಮೂರ್ತಿ
ನಾರಾಯಣಮೂರ್ತಿ Image Credit source: Exchange4Media
Follow us
ನಯನಾ ರಾಜೀವ್
|

Updated on: Dec 25, 2024 | 10:01 AM

ಈಗಾಗಲೇ ಸಂಚಾರ ದಟ್ಟಣೆ ಹಾಗೂ ಮಾಲಿನ್ಯದಿಂದಾಗಿ ನಗರದಲ್ಲಿ ವಾಸಿಸುವುದು ಕಷ್ಟಕರವಾಗಿದೆ. ಭವಿಷ್ಯದಲ್ಲಿ ಬೆಂಗಳೂರು, ಪುಣೆ, ಹೈದರಾಬಾದ್​ನಂತಹ ದೊಡ್ಡ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಉದ್ಯಮಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಸವಾಲನ್ನು ಎದುರಿಸಲು ಮತ್ತು ಅಂತಹ ವಲಸೆಯನ್ನು ತಡೆಯಲು ಕಾರ್ಪೊರೇಟ್ ಜಗತ್ತು, ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳ ನಡುವಿನ ಸಹಯೋಗದ ಅಗತ್ಯವನ್ನು ಅವರು ಒತ್ತಿ ಹೇಳಿದರು. 2030 ರ ವೇಳೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಒಂದು ಮುನ್ಸೂಚನೆಯೆಂದರೆ 20-25 ವರ್ಷಗಳಲ್ಲಿ ಭಾರತದಲ್ಲಿ ಕೆಲವು ಸ್ಥಳಗಳು ವಾಸಿಸಲು ಯೋಗ್ಯವಾಗಿರುವುದಿಲ್ಲ.ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ಸಂಚಾರ ದಟ್ಟಣೆ ಮತ್ತು ಮಾಲಿನ್ಯದಂತಹ ಸಮಸ್ಯೆಗಳಿಂದಾಗಿ ವಾಸಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹವಾಮಾನ ಬದಲಾವಣೆ ಸಮಸ್ಯೆ ವಿರುದ್ಧ ಹೋರಾಟ; ಯಾರದ್ದು ಯಾವ ಹೊಣೆ? ಗ್ಲೋಬಲ್ ಸಮಿಟ್​ನಲ್ಲಿ ತಜ್ಞರಿಂದ ಗಂಭೀರ ಚರ್ಚೆ

ಹವಾಮಾನ ಬದಲಾವಣೆಯನ್ನು ಪರಿಹರಿಸಲು ಮತ್ತು ಗ್ರಾಮೀಣದಿಂದ ನಗರಕ್ಕೆ ವಲಸೆ ಹೋಗುವುದನ್ನು ತಡೆಯಲು ಕಾರ್ಪೊರೇಟ್ ವಲಯ, ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳ ನಡುವೆ ತುರ್ತು ಸಹಯೋಗದ ಅಗತ್ಯವನ್ನು ಮೂರ್ತಿ ಒತ್ತಿ ಹೇಳಿದರು.

ಎಲ್ಲಾ ಪ್ರಮುಖ ಭಾರತೀಯ ನಗರಗಳು ತೀವ್ರತೆಯ ವಿವಿಧ ಹಂತಗಳಲ್ಲಿ ಒಂದೇ ರೀತಿಯ ಸವಾಲುಗಳನ್ನು ಎದುರಿಸುತ್ತಿವೆ. ಹೀಗಾಗಿ ತಪ್ಪಿಸಿಕೊಳ್ಳಲು ಬೇರೆ ಸ್ಥಳವಿಲ್ಲದೇ, ನಾವು ಅವರ ಸ್ವಂತ ನಗರಗಳಲ್ಲಿ ಈ ಸಮಸ್ಯೆಗಳನ್ನು ನಿಭಾಯಿಸಬೇಕು ಎಂದಿದ್ದಾರೆ. ರಾಜ್ಯಗಳ ಗ್ರಾಮೀಣ ಭಾಗಗಳಿಂದ ಬೆಂಗಳೂರು, ಬಹುಶಃ ಪುಣೆ, ಬಹುಶಃ ಹೈದರಾಬಾದ್‌ನಂತಹ ವಾಸಯೋಗ್ಯ ಸ್ಥಳಗಳಿಗೆ ಸಾಮೂಹಿಕ ವಲಸೆ ಸಂಭವಿಸುವ ಸಾಧ್ಯತೆಯಿದೆ ಎಂದು ಪುಣೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂರ್ತಿ ಹೇಳಿದರು.

ಬೆಂಗಳೂರಿನಲ್ಲಿ ತಂಪಾದ ಹವಾಮಾನ, ಐಟಿ-ಬಿಟಿ, ರಿಯಲ್ ಎಸ್ಟೇಟ್, ಅಪರಾಧಗಳ ಪ್ರಮಾಣ ಕಡಿಮೆ, ಸುರಕ್ಷತೆ ಈ ಎಲ್ಲಾ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತೇವೆ ಎನ್ನುವವರ ಸಂಖ್ಯೆ ಹೆಚ್ಚಿದೆ. ಮೆಟ್ರೋ, ಸುರಂಗ ಮಾರ್ಗಗಳ ನಿರ್ಮಾಣದತ್ತ ಸರ್ಕಾರದ ಗಮನವಿದೆ.

ಬೆಂಗಳೂರನ್ನು ಬಡವರು ಕೂಡ ಬದುಕಲು ಯೋಗ್ಯವಾದ ನಗರವನ್ನಾಗಿ ಮಾಡಲು ಅವರಿಗೆ ಬೇಕಾದ ವಸತಿ, ಶಿಕ್ಷಣ, ಆರೋಗ್ಯದಂತಹ ಮೂಲ ಸೌಕರ್ಯವನ್ನು ಒದಗಿಸಲಾಗುತ್ತಿದೆ, ಹಾಗಾಗಿ ಒಂದೋ ನಮ್ಮದೇ ಗ್ರಾಮೀಣ ಭಾಗಗಳಿಂದ ವಲಸೆ ಬರುವವರು ಸಾಕಷ್ಟು ಮಂದಿ ಇದ್ದಾರೆ, ಜತೆಗೆ ಹವಾಮಾನ ಬದಲಾವಣೆಯಿಂದ ಬೇಸತ್ತು ಬೇರೆ ರಾಜ್ಯಗಳಿಂದ ವಲಸೆ ಬರುವವರ ಸಂಖ್ಯೆಯು ದುಪ್ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ