Rain Alert ಕರ್ನಾಟಕದಲ್ಲಿ ಮುಂದಿನ 3 ದಿನ ವರುಣನ ಅಬ್ಬರ: ಎಲ್ಲೆಲ್ಲಿ ಮಳೆಯಾಗಲಿದೆ?

ಕರ್ನಾಟಕದಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain Alert ಕರ್ನಾಟಕದಲ್ಲಿ ಮುಂದಿನ 3 ದಿನ ವರುಣನ ಅಬ್ಬರ: ಎಲ್ಲೆಲ್ಲಿ ಮಳೆಯಾಗಲಿದೆ?
ಮಳೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 09, 2022 | 4:26 PM

ಬೆಂಗಳೂರು: ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಐದಾರು ದಿನಗಳಿಂದ ವರುಣ ಅಬ್ಬರಿಸುತ್ತಿದ್ದಾನೆ ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ  ಇದೀಗ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ(ಅಕ್ಟೋಬರ್ 9) ಮಂಗಳವಾರದವರೆಗೆ ಅಂದರೆ ಅಕ್ಟೋಬರ್ 11ರ ವರೆಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ನಿಲ್ಲದ ಮಳೆರಾಯನ ಅಬ್ಬರ, ಈ ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿ

ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗು ಸಾಧ್ಯತೆ ಇದ್ದು, ನಾಳೆ(ಅ.10) ನಾಡಿದ್ದು(ಅ.11) ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾ. ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮತ್ತೆ ವರುಣನ ಅಬ್ಬರದ ಎಚ್ಚರಿಕೆ

ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈಗಾಗಲೇ ಇಂದು(ಭಾನುವಾರ) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇದೆ.

ಈ ಹಿಂದೆ ಮಳೆ ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಸೃಷ್ಟಿಸಿತ್ತು. ಕೆಲ ಏರಿಯಾಗಳಲ್ಲಿ ಪ್ರವಾಹ ಭೀತಿ ಎದುರಾಗಿತ್ತು. ಇದೀಗ ಮತ್ತೆ ಮಳೆ ಎಚ್ಚರಿಕೆ ಬಂದಿದ್ದು, ಬೆಂಗಳೂರಿಗರ ನಿದ್ದೆಗೆಡಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Sun, 9 October 22

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ