Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟ ಸಿದ್ದರಾಮಯ್ಯ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡ್ತಾರೆ -ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅವರೊಳಗಿನ ಆಂತರಿಕ ತಿಕ್ಕಾಟದಿಂದ ಶೀಘ್ರವೇ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟ ಸಿದ್ದರಾಮಯ್ಯ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡ್ತಾರೆ -ನಳಿನ್ ಕುಮಾರ್ ಕಟೀಲ್
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
Follow us
ಆಯೇಷಾ ಬಾನು
|

Updated on:Mar 21, 2021 | 10:26 AM

ಮಸ್ಕಿ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅವರೊಳಗಿನ ಆಂತರಿಕ ತಿಕ್ಕಾಟದಿಂದ ಶೀಘ್ರವೇ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಸ್ಕಿ ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿ ಕಟೀಲ್ ವ್ಯಂಗ್ಯವಾಡಿದ್ದಾರೆ.

ಸಿಎಂ ಯಡಿಯೂರಪ್ಪ ಕೃಷ್ಣರಂತೆ ಸಾರಥಿ ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಕಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಕೃಷ್ಣರಂತೆ ಸಾರಥಿಯಾಗಿದ್ದಾರೆ. ಬಿ.ವೈ.ವಿಜಯೇಂದ್ರ ಅರ್ಜುನರಾಗಿದ್ದಾರೆ. ಶ್ರೀರಾಮುಲು ಭೀಮರಾಗಿದ್ದು, ಎನ್.ರವಿಕುಮಾರ್ ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬ್ರಹ್ಮಶ್ರೀ ಪ್ರಶಸ್ತಿಗೆ ಅರ್ಹ ವ್ಯಕ್ತಿ ಜನಾರ್ದನ ಪೂಜಾರಿ ಮಾತ್ರ: ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

Published On - 10:06 am, Sun, 21 March 21