ಮಂಗಳೂರು ಪೊಲೀಸ್ ಫೈರಿಂಗ್‌ನಲ್ಲಿ ಮೃತ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರ ಫೈರಿಂಗ್‌ನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಇಂದು ಹೇಳಿದ್ದಾರೆ. ಅಲ್ಲದೆ ಸಂಜೆ ಗೃಹ ಸಚಿವರ ಜೊತೆ ಚರ್ಚಿಸಿ ತನಿಖೆಯ ಬಗ್ಗೆ ನಿರ್ಧಾರ ಕೈಗೊಳ್ಳವುದಾಗಿಯೂ ಟಿವಿ9ಗೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರ ಹಿತರಕ್ಷಣೆ ನಮ್ಮ ಹೊಣೆ ಎಂದು ಟಿವಿ9ಗೆ ಮುಖ್ಯಮಂತ್ರಿ ಬಿ.ಎಸ್. […]
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರ ಫೈರಿಂಗ್‌ನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಇಂದು ಹೇಳಿದ್ದಾರೆ.
ಅಲ್ಲದೆ ಸಂಜೆ ಗೃಹ ಸಚಿವರ ಜೊತೆ ಚರ್ಚಿಸಿ ತನಿಖೆಯ ಬಗ್ಗೆ ನಿರ್ಧಾರ ಕೈಗೊಳ್ಳವುದಾಗಿಯೂ ಟಿವಿ9ಗೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರ ಹಿತರಕ್ಷಣೆ ನಮ್ಮ ಹೊಣೆ ಎಂದು ಟಿವಿ9ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಹೇಳಿದ್ದಾರೆ.
ಮೋದಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಶಡ್ಯಂತ್ರ: ವಿಧಾನಸೌಧದಲ್ಲಿ ಮಾತನಾಡುತ್ತ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಪ್ರಹಾರ ಮಾಡಿದ್ದಾರೆ. ಮಂಗಳೂರಿನಲ್ಲಿ ಕರ್ಪ್ಯೂ ಸಡಿಲಿಸಲಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಈಗ ಯಾವುದೇ ರಾಜಕೀಯ ಪಕ್ಷದ ಮುಖಂಡರು ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶೆ ಮಾಡಬಹುದು. ಪ್ರಚೋದನೆ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಯು.ಟಿ.ಖಾದರ್ ಮೇಲೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳುತ್ತದೆ. ಗಲಭೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಅವರಿಗೆ ತಲಾ ಹತ್ತು ಲಕ್ಷ ಪರಿಹಾರ ಘೋಷಿಸಿದ್ದೇವೆ ಎಂದರು.
ಮಂಗಳೂರು ಗಲಭೆಗೆ ಯಾರು ಕಾರಣರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ಮಾಡುತ್ತಿದ್ದವರೆಲ್ಲಾ ಹೊರ ರಾಜ್ಯಗಳಿಂದ ಕರೆಸಲ್ಪಟ್ಟವರು ಎಂಬುದು ಗೊತ್ತಾಗಿದೆ. ಮೋದಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕಾಂಗ್ರೆಸ್ ನಾಯಕರೇ ಮಾಡಿರುವ ಶಡ್ಯಂತ್ರ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯಲ್ಲಿ ಮಾತನಾಡಿದ್ದು ಇದಕ್ಕೆ ಸಾಕ್ಷಿ. ಚುನಾವಣೆಗಳಲ್ಲಿ ಜನ ಪಾಠ ಕಲಿಸಿದ್ದರೂ ಕಾಂಗ್ರೆಸ್ ನವರು ಇನ್ನೂ ಪಾಠ ಕಲಿತಿಲ್ಲ. ಇನ್ನಾದರೂ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು
ಜೆಡಿಎಸ್ನಿಂದ 5 ಲಕ್ಷ ಪರಿಹಾರ: ಇನ್ನು ಜೆಡಿಎಸ್ ಪಕ್ಷದಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಗಳೂರಿಗೆ ಭೇಟಿ ನೀಡಿ ಗೋಲಿಬಾರಿನಲ್ಲಿ ಮೃತರಾದ ಕುಟುಂಬಕ್ಕೆ ಸಾಂತ್ವನ ಹೇಳಿ ಮೃತರ ಕುಟುಂಬಕ್ಕೆ ಜೆಡಿಎಸ್ ವತಿಯಿಂದ 5 ಲಕ್ಷ ಪರಿಹಾರ ವಿತರಿಸಿದ್ದಾರೆ. ಈ ಗೋಲಿಬಾರ್ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸುವಂತೆ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತಿದ್ದೇನೆ ಎಂದು ಇದೇ ವೇಳೆ ತಿಳಿಸಿದ್ದಾರೆ.
Published On - 11:57 am, Sun, 22 December 19