ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

| Updated By: ganapathi bhat

Updated on: Apr 06, 2022 | 8:55 PM

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, ರಾಜ್ಯದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಬಿಡದಿಯ ಮಹಿಳೆ ನಾಗರತ್ನ ಎಂಬವರಿಗೆ ಲಸಿಕೆಯನ್ನು ನೀಡಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯಡಿಯೂರಪ್ಪ
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ದೇಶಾದ್ಯಂತ ನಡೆಯುವ ಕೊವಿಡ್ ವ್ಯಾಕ್ಸಿನೇಶನ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಬಳಿಕ, ಯಡಿಯೂರಪ್ಪ ರಾಜ್ಯದಲ್ಲಿ ಲಸಿಕೆ ಅಭಿಯಾನ ಆರಂಭಿಸಿದ್ದಾರೆ.

ದೇಶಾದ್ಯಂತ 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುತ್ತೇವೆ ಎಂದು ಪ್ರಧಾನಿ ಭಾಷಣದ ಬಳಿಕ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, ರಾಜ್ಯದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಬಿಡದಿಯ ಮಹಿಳೆ ನಾಗರತ್ನ ಎಂಬವರಿಗೆ ಲಸಿಕೆಯನ್ನು ನೀಡಲಾಗಿದೆ. ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಆರೋಗ್ಯ ಸಚಿವ ಕೆ.ಸುಧಾಕಾರ್ ಸಮ್ಮುಖದಲ್ಲಿ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ಪಡೆದವರಿಗೆ ಗುಲಾಬಿ ಹೂ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಜೊತೆಗೆ, ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಸಹ ಲಸಿಕೆಯನ್ನು ಪಡೆದಿದ್ದಾರೆ. ಲಸಿಕೆಯ ಬಗ್ಗೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಕೊವಿಡ್ ಲಸಿಕೆ ಅಭಿವೃದ್ಧಿಪಡಿಸಿದ ದೇಶದ ವಿಜ್ಞಾನಿಗಳಿಗೆ ಹಾಗೂ ಪ್ರಧಾನಿ ಮೋದಿಗೆ, ಸಿಎಂ ಬಿ.ಎಸ್.ಯಡಿಯೂರಪ್ಪ ದೇಶದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಲಸಿಕೆ ವಿಚಾರದಲ್ಲಿ ರಾಜಕಾರಣ ಮಾಡಬಾರದು: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿಕೆ
ಭಾರತದ ವಿಜ್ಞಾನಿಗಳು ಪ್ರಧಾನಿಯ ಪ್ರೇರಣೆ ಮೇರೆಗೆ, ವಿಶ್ವ ಮಟ್ಟದಲ್ಲಿ ಅತಿದೊಡ್ಡ ವ್ಯಾಕ್ಸಿನ್ ಕಂಡು ಹಿಡಿದಿದ್ದಾರೆ. ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ. ಭಾರತದಲ್ಲಿ ತಯಾರದ 2 ವ್ಯಾಕ್ಸಿನ್‌ಗಳನ್ನು ಕೊಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಲಸಿಕೆ ಅಭಿಯಾನವನ್ನು ಅಚ್ಚುಕಟ್ಟಾಗಿ ನಡೆಸಲಾಗಿದೆ. ಈ ಮಧ್ಯೆ, ಜನರಲ್ಲಿ ಸಂಶಯ ಉಂಟುಮಾಡುವ ಕೆಲಸ ಮಾಡಬಾರದು, ಯಾವುದೇ ರಾಜಕಾರಣ ಮಾಡಬಾರದು ಎಂದು ಪ್ರಲ್ಹಾದ್ ಜೋಷಿ ಹೇಳಿದ್ದಾರೆ.’

ಪ್ರಲ್ಹಾದ್ ಜೋಷಿ ಲಸಿಕೆ ಅಭಿಯಾನ ಚಾಲನೆಯಲ್ಲಿ ಭಾಗವಹಿಸಿದರು

ಸಂಪೂರ್ಣ ವಿಶ್ವಾಸದೊಂದಿಗೆ ಲಸಿಕೆ ತೆಗೆದುಕೊಳ್ಳಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

Published On - 11:56 am, Sat, 16 January 21