ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಜಮೀನು ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಬೊಮ್ಮಾಯಿ
ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ಸಾಲುಮತದ ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಬೆಂಗಳೂರು: ಸಾಲು ಮರದ ತಿಮ್ಮಕ್ಕ (Saalumarada Thimmakka) ಅವರಿಗೆ ಒಂದು ಸೈಟು ಹಾಗೂ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರು ಬೆಂಗಳೂರಿನಲ್ಲಿ ಮಂಗಳವಾರ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾದರು. ಶತಾಯುಷಿ ಆಗಿರುವ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀವಾರ್ದ ಪಡೆದ ಸಿಎಂ ಬೊಮ್ಮಾಯಿ ಅವರ ತಲೆ ಮುಟ್ಟಿದ ತಿಮ್ಮಕ್ಕ, ರಾಷ್ಟ್ರಪತಿಗಳಿಗೆ ಆಶೀರ್ವದಿಸಿದಂತೆ ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದೇ ವೇಳೆ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದ ಸಿಎಂ, ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಕೋಲಾರ ಶತಶೃಂಗ ಪರ್ವತದ ಮೇಲೆ 15,000 ಯೋಗ ಪಟುಗಳಿಂದ ಯೋಗಾಭ್ಯಾಸ
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:54 pm, Tue, 21 June 22