ನಾಳೆ ರಾಜ್ಯ ಸರ್ಕಾರದಿಂದ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆಯ ಅಧಿಕೃತ ಆಚರಣೆ; ಸಿಎಂಬ ಬೊಮ್ಮಾಯಿ ಘೋಷಣೆ

| Updated By: guruganesh bhat

Updated on: Aug 14, 2021 | 4:19 PM

Azadi Ka Amrut Mahotsav: ಕಾಗಿನೆಲೆ ಶ್ರೀಗಳಿಗೆ ನಾಳೆಯ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬ ಆಚರಣೆಗೆ ಆಹ್ವಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಳೆ ರಾಜ್ಯ ಸರ್ಕಾರದಿಂದ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆಯ ಅಧಿಕೃತ ಆಚರಣೆ; ಸಿಎಂಬ ಬೊಮ್ಮಾಯಿ ಘೋಷಣೆ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಕನ್ನಡ ನಾಡಿನ ವೀರ ಪುರುಷ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಅಧಿಕೃತವಾಗಿ ಆಚರಿಸುವ ಬೇಡಿಕೆ ಇತ್ತು. ಈ ಬೇಡಿಕೆಯನ್ನು ಪರಿಗಣಿಸಿ ನಾಳೆ  ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಆಚರಿಸಲು ಅಧಿಕೃತ ಆದೇಶ ಮಾಡಲಾಗಿದೆ. ನಾಳೆಯೇ ಈ ಆದೇಶ ಕಾರ್ಯಗತವಾಗಲಿದ್ದು ಅಧಿಕೃತವಾಗಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಾಗಿನೆಲೆ ಶ್ರೀಗಳಿಗೆ ನಾಳೆಯ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬ ಆಚರಣೆಗೆ ಆಹ್ವಾನಿಸಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಂಗೊಳ್ಳಿ ರಾಯಣ್ಣನವರ ಹುಟ್ಟುಹಬ್ಬ ಆಚರಣೆ ಮಾಡಬೇಕು ಅಂತಾ ಹೋರಾಟ ಮಾಡಿದ್ದೆವು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಮಾಜದ ಪರ ಧನ್ಯವಾದ ತಿಳಿಸುತ್ತೇನೆ. ನಾನು ಕೂಡ ನಾಳೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ನಿರಂಜನಾನಂದ ಪುರಿ ಶ್ರೀ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯ ಅಧಿಕೃತ ಘೋಷಣೆ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: 

ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಕೊವಿಡ್ ನೆಪದಲ್ಲಿ ಕೇವಲ ಹಿಂದೂಗಳ ಹಬ್ಬಕ್ಕೆ ನಿರ್ಬಂಧ ನಡೆಯಲ್ಲ: ಬಸನಗೌಡ ಪಾಟೀಲ ಯತ್ನಾಳ್ ಎಚ್ಚರಿಕೆ

(CM Basavaraj Bommai announce Official Celebration of freedom fighter Sangolli Rayanna)

Published On - 4:02 pm, Sat, 14 August 21