Covid Curfew: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Covid Curfew: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)

ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

TV9kannada Web Team

| Edited By: guruganesh bhat

Aug 06, 2021 | 3:07 PM

ಬೆಂಗಳೂರು: ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ (Weekend Curfew) ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:  

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ

Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

(CM Basavaraj Bommai announce Statewide night curfew weekend curfew in border districts in Karnataka)

Follow us on

Related Stories

Most Read Stories

Click on your DTH Provider to Add TV9 Kannada