ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ

| Updated By: ರಮೇಶ್ ಬಿ. ಜವಳಗೇರಾ

Updated on: Dec 19, 2022 | 5:52 PM

ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳದ ಬೆನ್ನಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ.

ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಳಗಾವಿ: ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ (weavers) ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಿದ ಬೆನ್ನಲ್ಲೇ ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಸಿಎಂ ಬೊಮ್ಮಾಯಿ(Basavaraj Bommai), ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ (Free Electricity )ಪೂರೈಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ಬಹುದಿನಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ನೇಕಾರ ಸಮುದಾಯ ಸುವರ್ಣ ಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಇಂದು (ಡಿಸೆಂಬರ್ 19) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನಿಸಿ ಗೌರವಿಸಿತು. ಈ ವೇಳೆ ಮಾತನಾಡಿದ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ಅಲ್ಲಿ (ತಮಿಳುನಾಡು) ಎಷ್ಟು ಫ್ರೀ ಕೊಡುತ್ತಿದೆಯೋ ಅಷ್ಟನ್ನು ನಾವು ಇಲ್ಲಿ ಕೊಡುತ್ತೇವೆ. ಯುನಿಟ್ ಗೆ 80 ರೂ ಇದ್ದು, ಅದನ್ನ 40 ರೂ.ಗೆ ಇಳಿಸುತ್ತೇವೆ. ನಿಮ್ಮ ಪ್ರಮುಖ ಬೇಡಿಕೆಗಳಿಗೆ ನಾನು ಈಗಾಗಲೇ ಒಪ್ಪಿಗೆ ಕೊಟ್ಟಿದ್ದೇನೆ ಎಂದು ಹೇಳಿದರು.

ನಮ್ಮ ಮಕ್ಕಳಿಗೆ ಸ್ಕಾಲರ್‌ಶಿಪ್‌ ಕೊಡಿ ಎಂದು ನೀವು ಕೇಳಿರಲಿಲ್ಲ. ಆದ್ರೆ ನಾನು ನೇಕಾರರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಣೆ ಮಾಡಿದ್ದೇನೆ. ಜನವರಿಯೊಳಗೆ ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಯಾಗುತ್ತೆ. ನೇಕಾರರಿಗೆ ಘೋಷಿಸಿದ ಯೋಜನೆ ತಕ್ಷಣ ಜಾರಿಗೆ ಆದೇಶ ಪ್ರಕಟಿಸ್ತೇನೆ. ನಮ್ಮ‌ ಸರ್ಕಾರ ನೇಕಾರರಿಗೆ ಸ್ಪಂದಿಸದಂತೆ ಯಾವ ಸರ್ಕಾರ ಸ್ಪಂದಿಸಿಲ್ಲ ಎಂದರು.

5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ

ಕೈಮಗ್ಗ ನೇಕಾರರಿಗೆ (Weavers) ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ (Samman Scheme) ಗೆ ನಾಳೆ (ಡಿ. 16) ಚಾಲನೆ ದೊರೆಯಲಿದೆ. ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮಹಾಮಾರಿ ಮತ್ತು ಆರ್ಥಿಕ ಹಿನ್ನೆಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21 ನೇ ಸಾಲಿನಿಂದ ಅನ್ವಯವಾಗುವಂತೆ, ‘ನೇಕಾರ ಸಮ್ಮಾನ್’ ಎಂಬ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು.

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿದೆ. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5,000/- ಗಳಿಗೆ ಹೆಚ್ಚಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:32 pm, Mon, 19 December 22